ಜಿಲ್ಲೆ

ಪರಿಸರ ಅಸಮತೋಲನದಿಂದ ಅತಿವೃಷ್ಟಿ, ಅನಾವೃಷ್ಟಿ

ಕೆ.ಎಂ.ದೊಡ್ಡಿ: ಪರಿಸರ ಅಸಮತೋಲನದಿಂದಾಗಿ ಅತಿವೃಷ್ಟಿ- ಅನಾವೃಷ್ಟಿಗೆ ಗುರಿಯಾಗುತ್ತಿದ್ದೇವೆ ಎಂದು ಪ್ರಾರ್ಥನಾ ಇಂಟರ್‌ನ್ಯಾಷನಲ್ ಸ್ಕೂಲ್ ಗೌರವಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟರಾಮು ವಿಷಾದ ವ್ಯಕ್ತಪಡಿಸಿದರು.


ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಪ್ರಾರ್ಥನಾ ಇಂಟರ್‌ನ್ಯಾಷನಲ್ ವತಿಯಿಂದ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪರಿಸರ ಜಾಗೃತಿ ಜಾಥಾ ಹಾಗೂ ಸಸಿ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗಿಡಗಳನ್ನು ನೆಟ್ಟು ಬೆಳೆಸಿದರೆ ಮಾತ್ರ ಪರಿಸರ ಉಳಿಸಲು ಸಾಧ್ಯ. ಪ್ರತಿಯೊಬ್ಬರು ಪರಿಸರ ಬಗ್ಗೆ ಕಾಳಜಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.


ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಪರಿಸರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಪ್ರಾರ್ಥನಾ ವಿದ್ಯಾ ಸಂಸ್ಥೆಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದರು.


ಬಳಿಕ ಪ್ರಾರ್ಥನಾ ಇಂಟರ್‌ನ್ಯಾಷನಲ್ ಸ್ಕೂಲ್ ನಿರ್ದೇಶಕ, ತೊರೆಚಾಕನಹಳ್ಳಿ ಶಂಕರೇಗೌಡ ಮಾತನಾಡಿ, ಪ್ರತಿಯೊಬ್ಬರು ಪರಿಸರ ಕಾಳಜಿಯ ಬಗ್ಗೆ ಗಮನ ನೀಡಿ ಪ್ಲಾಸ್ಟಿಕ್‌ನಿಂದ ದೂರವಿರುವಂತೆ ಕಿವಿಮಾತು ಹೇಳಿದರು.


ಈ ವೇಳೆ ಶಾಲಾ ವಿದ್ಯಾರ್ಥಿಗಳು ಮನೆಯಿಂದ ತಂದಿದ್ದ ಸಸಿಗಳನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ವಿಭಿನ್ನವಾಗಿ ಪರಿಸರ ದಿನ ಆಚರಿಸಿದರು. ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಕೃಷ್ಣ, ಶಿಕ್ಷಕರಾದ ಅಶ್ವಿನಿ ಸವಿತಾ, ಶೋಭಾರಾಣಿ, ಸ್ಮಿತಾ, ಅಕ್ಷತಾ, ಪ್ರಿಯಾಂಕಾ, ರೂಹಿ, ಕೆ.ಎನ್.ಅನುಪಮಾ ಇದ್ದರು.