ಸಿಂದಗಿ: ನಮ್ಮ ಆರೋಗ್ಯಕ್ಕೆ ಸಹಕಾರಿಯಾಗಿರುವ ಪರಿಸರವನ್ನು ನಾವೆಲ್ಲರೂ ಮಕ್ಕಳಂತೆ ರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ ಡಾ. ಪ್ರದೀಪಕುಮಾರ ಹಿರೇಮಠ ಹೇಳಿದರು.
ಸೋಮವಾರ ಪಟ್ಟಣದ ಆದರ್ಶ ವಿದ್ಯಾಲಯದ ಆವರಣದಲ್ಲಿ ಜಿಪಂ ಶಾಲಾ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಇವರುಗಳ ಸಹಯೋಗದಲ್ಲಿ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಸಸಿ ನೆಟ್ಟು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ನಾವು ನೆಡುವ ಮರ ನಮ್ಮ ಕುಟುಂಬ ಭವಿಷ್ಯದ ಪೀಳಿಗೆಗೆ ಉತ್ತಮ ಆರೋಗ್ಯಕರ ವಾತಾವರಣ ಕಲ್ಪಿಸುತ್ತದೆ. ಪ್ರತಿಯೊಬ್ಬರೂ ಮರಗಳನ್ನು ನೆಟ್ಟು ಬೆಳೆಸುವ ಸಂಕಲ್ಪವನ್ನು ತೊಡಬೇಕು ಎಂದರು.
ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿದರು. ಶಾಲೆಯ ಮುಖ್ಯೋಪಾಧ್ಯಾಯ ಎಸ್.ಕೆ. ಬಿರಾದಾರ ಹಾಗೂ ಬೋಧಕ ಸಿಬ್ಬಂದಿ ವರ್ಗದವರಿದ್ದರು.