ಅರಬಾವಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ ನೀಡಿದರು. ವಸಂತ ಸಾಲಿಯಾನ್, ಎಚ್.ಆರ್.ಲವಕುಮಾರ, ಮಮತಾ ನಾಯಕ ಇತರರಿದ್ದರು. 
ಜಿಲ್ಲೆ

ಪರಿಸರ ರಕ್ಷಣೆ ಮಾಡಲು ಎಲ್ಲರೂ ಶ್ರಮಿಸಲಿ

ಗೋಕಾಕ: ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಮುಂದಾಗಬೇಕು ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.

ಸಮೀಪದ ಅರಬಾವಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲಾ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ 25 ಸಾವಿರ ಸಸಿನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅರಣ್ಯ ಸಂರಕ್ಷಣೆಯಂತಹ ಸಾಮಾಜಿಕ ಕಾರ್ಯ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್, ಜಿಲ್ಲಾ ನಿರ್ದೇಶಕ ಎಚ್.ಆರ್.ಲವಕುಮಾರ, ಯೋಜನಾಧಿಕಾರಿ ಮಮತಾ ನಾಯಕ, ಕೃಷಿ ಅಧಿಕಾರಿ ಭೀಮಪ್ಪ ಇಟಗಿ, ವಲಯ ಅರಣ್ಯ ಅಧಿಕಾರಿಗಳಾದ ಆನಂದ ಹೆಗಡೆ, ಸಂಜೀವ ಸವಸುದ್ದಿ, ಪ್ರಾಚಾರ್ಯ ಶಶಿಕಲಾ ಸತ್ಯನಾಯಕ, ಗಣ್ಯರಾದ ರಮೇಶ ಮಾದರ, ಕೃಷ್ಣಾ ಬಂಡಿವಡ್ಡರ, ದುಂಡಪ್ಪ ಸುತಾರ, ನಾಗಲಿಂಗ ಪೋತದಾರ, ಅಡಿವೆಪ್ಪ ಬಿಲಕುಂದಿ, ಗಣಪತಿ ಇಳಿಗೇರ ಇತರರಿದ್ದರು.