ಚಿತ್ರದುರ್ಗ: ಡಯಟ್ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ ಘಟಕದಿಂದ ಆಯೋಜಿಸಿದ್ದ ಪರಿಸರ ದಿನಾಚರಣೆಯಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಮಾತನಾಡಿ,ಪರಿಸರ ಸಂರಕ್ಷಣೆ ಹೊಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಎನ್‌ಪಿಇಪಿ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಬಸವರಾಜು, ಹಿರಿಯ ಉಪ ನ್ಯಾಸಕ ಎಸ್.ಜ್ಞಾನೇಶ್ವರ, ಉಪನ್ಯಾಸಕರಾದ ಕೆ.ಜಿ.ಪ್ರಶಾಂತ್, ಯು.ಸಿದ್ದೇಶಿ, ಬಿ.ಎಸ್.ನಿತ್ಯಾನಂದ, ತಾಂತ್ರಿಕ ಸಹಾಯಕ ಕೆ.ಆರ್.ಲೋಕೇಶ್, ಪ್ರಥಮ ದರ್ಜೆ ಸಹಾಯಕರಾದ ಮಹೇಂದ್ರ, ಮಂಜುನಾಥ್ ಇತರರು ಇದ್ದರು.