ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದಲ್ಲಿ ಬಿವಿವಿ ಸಂಘದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಸೇವಾ ಭಾರತಿ ಟ್ರಸ್ಟ್ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮ ಬಿವಿವಿ ಸಂಘದ ಶಾಲಾ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ ಉದ್ಘಾಟಿಸಿದರು. ಡಾ.ಎಚ್.ಡಿ.ಪಾಟೀಲ, ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಡಾ. ಮಾರುತಿ ಎ.ಪಾಟೋಳಿ, ಸೇವಾ ಭಾರತಿ ಟ್ರಸ್ಟ್‌ ಆಶ್ರಯಧಾಮದ ಚಂದ್ರು ಹೂಗಾರ ಇದ್ದರು. 
ಜಿಲ್ಲೆ

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ಜವಾಬ್ದಾರಿ

ಬಾಗಲಕೋಟೆ: ಪರಿಸರ ಸಂರಕ್ಷಣೆಯಿಂದ ನಾಡು, ಕಾಡು ಎಲ್ಲವು ಉಳಿಯುತ್ತದೆ ಎಂದು ಬಿವಿವಿ ಸಂಘದ ಶಾಲಾ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ ಹೇಳಿದರು.

ತಾಲೂಕಿನ ಕಿರಸೂರ ಗ್ರಾಮದಲ್ಲಿ ಬಿವಿವಿ ಸಂಘದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಸೇವಾ ಭಾರತಿ ಟ್ರಸ್ಟ್ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಸಿ ನೆಟ್ಟ ಮಾತ್ರ ಕಾರ್ಯಪೂರ್ಣ ಗೊಂಡಂತಲ್ಲ. ಅವುಗಳ ಬೆಳವಣಿಗೆಗೆ ಒತ್ತು ಕೊಡಬೇಕು. ಆ ಬಗ್ಗೆ ವಿದ್ಯಾರ್ಥಿಗಳೇ ಆಸಕ್ತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಸೇವಾ ಭಾರತಿ ಟ್ರಸ್ಟ್ ರಜತ ಮಹೋತ್ಸವ ಕಾರ್ಯಕ್ರಮದ ಪ್ರಾಂತ ಕಾರ್ಯದರ್ಶಿ ಡಾ.ಎಚ್.ಡಿ.ಪಾಟೀಲ ಮಾತನಾಡಿ, ಸೇವಾ ಭಾರತಿ ಟ್ರಸ್ಟ್‌ ರಾಜ್ಯಾದ್ಯಂತ ಸಮಾಜಮುಖಿಯಾದ ಸಾಕಷ್ಟು ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಈಗ ೨೫ ವರ್ಷಗಳ ಸಾರ್ಥಕ ಸೇವೆ ಪೂರ್ಣಗೊಳಿಸಿದ್ದಕ್ಕಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಮಾಡಲು ಯೋಜಗಳನ್ನು ಹಾಕಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಅನಗವಾಡಿಯಲ್ಲಿ ೮೦ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ. ಕಿರಿಸೂರಿನಲ್ಲಿ ಅರವತ್ತಕ್ಕೂ ಹೆಚ್ಚು ಸಸ್ಯಗಳನ್ನು ನೆಡಲಾಗುವುದು ಎಂದು ಹೇಳಿದರು.

ಎನ್‌ಎಸ್‌ಎಸ್ ನೋಡಲ್ ಅಽಕಾರಿ ಡಾ. ಮಾರುತಿ ಎ.ಪಾಟೋಳಿ, ಸೇವಾ ಭಾರತಿ ಟ್ರಸ್ಟ್‌ ಆಶ್ರಯಧಾಮದ ಚಂದ್ರು ಹೂಗಾರ ಇದ್ದರು.