ಸುರಪುರ ತಹಸಿಲ್ ಕಚೇರಿಯಲ್ಲಿ ಗಣೇಶ ಚತುರ್ತಿ ನಿಮಿತ್ತ ಮಂಗಳವಾರ ಕರೆದಿದ್ದ ಸಭೆಯಲ್ಲಿ ತಹಸೀಲ್ದಾರ್ ಕೆ. ವಿಜಯಕುಮಾರ ಮಾತನಾಡಿದರು. ತಾಲೂಕು ಅರೋಗ್ಯಧಿಕಾರಿ ಡಾ.ಆರ್.ವಿ.ನಾಯಕ, ಪೌರಾಯುಕ್ತ ಜೀವನ ಕುಮಾರ ಕಟ್ಟಿಮನಿ, ಪಿಎಸ್‌ಐ ಶರಣಪ್ಪ ಹವಾಲ್ದಾರ, ಸಂದೀಪ ಕುಮಾರ, ಗಂಗಾಧರ, ರಂಗನಾಥ ದಳವಾಯಿ ಇದ್ದರು. 
ಜಿಲ್ಲೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಿ

ಸುರಪುರ: ತಾಲೂಕಿನ ವಿವಿಧ ಸಂಘ-ಸAಸ್ಥೆಗಳು ಮತ್ತು ಗಣೇಶ ಮಂಡಳಿಗಳು ಕಡ್ಡಾಯವಾಗಿ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ಹೇಳಿದರು.

ಈ ಕುರಿತು ತಹಸಿಲ್ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ಸ್ಥಾಪಿಸದೆ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಕೋಮು ಸೌಹಾರ್ದತೆ ಕಾಪಾಡುವುದರ ಜತೆಗೆ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಆದ್ದರಿಂದ ಗಣೇಶ ಚತುರ್ಥಿಯಂದು ಪಿಒಪಿ ಗಣೇಶ ಮೂರ್ತಿ ಹಾಗೂ ಪರಿಸರಕ್ಕೆ ಹಾನಿಯಾಗುವ ವಸ್ತುಗಳನ್ನು ಬಳಸದೆ ಮಣ್ಣಿನ ಮೂರ್ತಿಗಳನ್ನು ಸ್ಥಾಪಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು. ಅಲ್ಲದೆ ಎಲ್ಲರೂ ಕಡ್ಡಾಯವಾಗಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.

ತಾಲೂಕು ಅರೋಗ್ಯಧಿಕಾರಿ ಡಾ.ಆರ್.ವಿ.ನಾಯಕ, ಪೌರಾಯುಕ್ತ ಜೀವನ ಕುಮಾರ ಕಟ್ಟಿಮನಿ, ಪಿಎಸ್‌ಐ ಶರಣಪ್ಪ ಹವಾಲ್ದಾರ, ಸಂದೀಪ ಕುಮಾರ, ಗಂಗಾಧರ, ರಂಗನಾಥ ದಳವಾಯಿ ಮತ್ತು ವಿವಿಧ ಸಂಘ-ಸAಸ್ಥೆಗಳ ಮುಖಂಡರು ಸಭೆಯಲ್ಲಿದ್ದರು.