ಜಿಲ್ಲೆ

ಪರೀಕ ಸೌಖ್ಯವನದಲ್ಲಿ ನವಚೇತನ ಸಂಯೋಗ ಶಿಬಿರ

ಬೆಳ್ತಂಗಡಿ: ರೋಟರಿ ಕ್ಲಬ್ ಪರ್ಕಳ ಹಾಗೂ ಬಳಕೆದಾರರ ವೇದಿಕೆ ದೇವಿನಗರ ಆಶ್ರಯದಲ್ಲಿ ನವಚೇತನ ಸಂಯೋಗ ಶಿಬಿರ ಸೌಖ್ಯವನದ ಕ್ಷೇಮ ಹಾಲ್‌ನಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಪೊಲೀಸ್ ಡಿವೈಎಸ್‌ಪಿ ಪ್ರಭು ಡಿ.ಟಿ.ಮಾತನಾಡಿ, ಪೊಲೀಸ್ ಸಿಬ್ಬಂದಿ ಕರ್ತವ್ಯ ನಿಷ್ಠೆ ಬಗ್ಗೆ ವಿವರಿಸಿದರು.

ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಸೌಖ್ಯವನದಲ್ಲಿ ಕಳೆದ ಒಂದು ತಿಂಗಳ ಕಾಲ ಯೋಗ ತರಬೇತಿ, ನಿಯಮಿತ ಆಹಾರ ಪದ್ಧತಿ, ಮಾನಸಿಕ ಸಮತೋಲನದ ಬಗ್ಗೆ ತಜ್ಞ ಪ್ರಕೃತಿ ಚಿಕಿತ್ಸಾ ವೈದ್ಯರು ಕೌನ್ಸೆಲಿಂಗ್ ನೀಡಿದರು.

ಶಿಬಿರಾರ್ಥಿ ಪೊಲೀಸ್ ಸಿಬ್ಬಂದಿಗಳನ್ನು ರೋಟರಿ ಪರ್ಕಳ ವತಿಯಿಂದ ಗೌರವಿಸಲಾಯಿತು. ಪರ್ಕಳ ರೋಟರಿ ಕ್ಲಬ್ ನೂತನ ಅಧ್ಯಕ್ಷ ಹಾಜಿ ಅಬ್ದುಲ್ಲಾ ಅಬುಬಕ್ಕರ್, ಬಳಕೆದಾರರ ವೇದಿಕೆ ಅಧ್ಯಕ್ಷ ರತ್ನಾಕರ ಶೆಟ್ಟಿ ಮತ್ತು ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ ಉಪಸ್ಥಿತರಿದ್ದರು.

ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿದರು. ರವೀಂದ್ರ ಆಚಾರ್ಯ ವಂದಿಸಿದರು.