ಬಾಗಲಕೋಟೆ: ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ರವಿವಾರ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಭೇಟಿ ನೀಡಿ ಪರಿಶೀಲಿಸಿದರು.
ಬಾಗಲಕೋಟೆ ನವನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಹಾಗೂ ಮುಧೋಳ ನಗರದ ಆರ್.ಎಂ.ಜಿ ಮತ್ತು ಬೀಳೂರು ಗುರುಬಸವ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸ್ಥಾಪಿಸಲಾದ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಕೈಗೊಂಡ ಕ್ರಮ ಹಾಗೂ ಹಾಜರಾತಿ ಬಗ್ಗೆ ಮಾಹಿತಿ ಪಡೆದುಕೊಂಡರು.