ಜಿಲ್ಲೆ

ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2024-25ನೇ ಸಾಲಿನಲ್ಲಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್,ಕೆಎಎಸ್ ಸ್ಪರ್ಧಾತ್ಮ ಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಂದ ಸೇವಾಸಿಂಧು ತಂತ್ರಾಂಶ ಮೂಲಕ ಆ.31ರೊಳಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಪರೀಕ್ಷಾ ಪೂ ರ್ವ ತರಬೇತಿ ನೀಡಲಾಗುತ್ತದೆ.  http://sevasindhu.karnataka.gov.in/sevasindhu/DepartmentServices ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.