ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. 
ಜಿಲ್ಲೆ

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಶಾಲಾ ಮಕ್ಕಳು

ಬಾಗಲಕೋಟೆ: ನಗರದ ಬಿವಿವಿ ಸಂಘದ ಮಿನಿಸಭಾಭವನದಲ್ಲಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಶುಕ್ರವಾರ ವೀಕ್ಷಣೆ ಮಾಡಿದರು. ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಬೃಹತ್ ಎಲ್ ಇಡಿ ಪರದೆ ಮೂಲಕ ವಿವಿಧ ಶಾಲಾ ಮಕ್ಕಳು, ಶಿಕ್ಷಕರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ, ವೀರಣ್ಣ ಚರಂತಿಮಠ, ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಸಿದ್ದರಾಮ ಮನಹಳ್ಳಿ, ಶಿಕ್ಷಣ ಇಲಾಖೆಯ ಉಪ ಉಪನಿರ್ದೇಶಕರಾದ ಕೆ.ಡಿ.ಬಡಿಗೇರ್, ಮಹಾಂತೇಶ ಶೆಟ್ಟರ್, ಜಿಲ್ಲಾ ಯೋಜನಾ ಸಮನ್ವಯ ಅಧಿಕಾರಿ ಜಾಶ್ಮಿನ್ ಕಿಲ್ಲೆದಾರ ಸೇರಿದಂತೆ ಪ್ರಾಚಾರ್ಯರು, ಶಿಕ್ಷಕರು ಬಸವೇಶ್ವರ ಬಾಲಕ ಬಾಲಕಿಯರ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು ಭಾಗವಹಿಸಿದ್ದರು