ಚಿಕ್ಕಮಗಳೂರು: ಬಲಾಡ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋಪಕಾರಿ ಗುಣ ಇರುವವರಿಗೆ ಪುಣ್ಯ, ಪರಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ. ಬದಲಿಗೆ ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ಧ ೨೫ನೇ ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನ ಆತ್ಮದಲ್ಲಿ ದೇವರು ನೆಲೆಸಿರುತ್ತಾನೆ. ನಮ್ಮೊಳಗೆ ಎಂದಿಗೂ ಕೀಳರಿಮೆ ಇರಕೂಡದು. ಒಂದು ಕಾಲದಲ್ಲಿ ರಾಜಮಹಾರಾಜರಿಗೆ ದೊರಕದ ದೇವರ ದರ್ಶನ, ಬೇಡರ ಕಣ್ಣಪ ಭಕ್ತಿಗೆ ಒಲಿದು ಪರಮಶಿವ ಪ್ರತ್ಯಕ್ಷನಾದನು. ಶ್ರೀರಾಮನು ಶಬರಿ ಭಕ್ತಿಗೆ ಮೆಚ್ಚಿ ಎಂಜಲು ತಿಂದರೆ ಹೊರತು ಜಾತಿಯಿಂದಲ್ಲ ಎನ್ನುವ ಸತ್ಯ ಅರಿಯಬೇಕು ಎಂದು ತಿಳಿಸಿದರು.
ತಿರುಪತಿ ತಿರುಮಲ ದೇವಸ್ಥಾನದ ಮಂಡಳಿ ಸದಸ್ಯ ನರೇಶ್‌ಕುಮಾರ್ ಮಾತನಾಡಿ, ಸವಿತಾ ಸಮಾಜದ ಬಂಧುಗಳು ಸರ್ಕಾರಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಪ್ರತಿ ಅಂಗಡಿಗಳಲ್ಲಿ ಸೌಲಭ್ಯದ ಕರಪತ್ರಗಳನ್ನು ಹಾಕಿ ಜನಾಂಗಕ್ಕೆ ತಿಳಿಹೇಳುವ ಮೂಲಕ ಸವಿತಾ ಸಮಾಜಕ್ಕೆ ಮೀಸಲಿರಿಸಿರುವ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ, ಇತ್ತೀಚೆಗೆ ಕ್ಷೌರಿಕ ವೃತ್ತಿಯಲ್ಲಿರುವ ಜನಾಂಗವನ್ನು ಅಸ್ಪÊಷ್ಯರೆಂದು ಭಾವಿಸಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರö್ಯ ದೊರಕಿ ಏಳೂವರೆ ದಶಕಗಳು ಕಳೆದರೂ ಅಸ್ಪÊಷ್ಯರಿಗೆ ನೈತಿಕ ಸ್ವಾತಂತ್ರö್ಯ ಸಿಕ್ಕಿಲ್ಲ. ಇಂದಿಗೂ ಕೆಲವು ಬಡಾವಣೆಗಳಲ್ಲಿ ದಲಿತ ಸಮುದಾಯಕ್ಕೆ ಬಾಡಿಗೆಗೆ ಮನೆಗಳನ್ನು ಕೊಡುವ ಪದ್ಧತಿ ನಿಷೇದಿಸಿರುವುದು ಶೋಚನೀಯ ಎಂದರು.
ವಿಧಾನ ಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ ಮಾತನಾಡಿ, ನದಿಗಳ ನೀರು ಎಲ್ಲೆಡೆ ಹರಿದು ಕೊನೆಗೆ ಸಮುದ್ರಕ್ಕೆ ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳು ಫಲವತ್ತತೆ ಹೊಂದಿ ಕೊನೆಗೆ ಹಿಂದೂ ಎಂಬ ಮಹಾಸಾಗರಕ್ಕೆ ಸೇರ್ಪಡೆಗೊಂಡು ಗಟ್ಟಿತನ ಮೆರೆಯಬೇಕು. ಎಲ್ಲಾ ಹಿಂದೂಗಳು ಒಂದೇ ಎಂಬ ಸಂಕಲ್ಪ ಹೊಂದಿದರೆ ಮಾತ್ರ ದೇಶ ಸದೃಢವಾಗಲು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡಪೂಜಾರಿ ಹಿರೇಮಗಳೂರು ಕಣ್ಣನ್, ಟ್ರಸ್ಟ್ ಅಧ್ಯಕ್ಷ ಸಿ.ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ರಾಜ್ಯ ತಜ್ಞಮೌಲ್ಯ ನಿರ್ಧರಣಾ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್, ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸಿ.ಎಂ.ಯೋಗೀಶ್, ಹಿರೇಮಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಕೆ.ಕೇಶವಮೂರ್ತಿ ಉಪಸ್ಥಿತರಿದ್ದರು.