ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನುz್ದÉÃಶಿಸಿ ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಮಾತನಾಡಿದರು. ಕೆ.ಎಸ್.ಆನಂದ್, ಡಾ.ಕೆ.ಪಿ.ಅಂಶುಮAತ್, ಬಿ.ಎಚ್.ಹರೀಶ್, ಎಂ.ಸಿ.ಶಿವಾನAದ ಸ್ವಾಮಿ ಮತ್ತಿತರರಿದ್ದರು. 
ಜಿಲ್ಲೆ

ಪಶು ಸಂಗೋಪನೆ, ರೇಷ್ಮೆಗೆ ಹೆಚ್ಚಿನ ಆಧ್ಯತೆ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪಶು ಸಂಗೋಪನೆಗೆ ಮತ್ತು ರೇಷ್ಮೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನುz್ದೆÃಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಪ್ರತ್ಯೇಕವಾಗಿ ಡೈರಿ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಡೈರಿ ತೆರೆಯುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಡೂರು ಮತ್ತು ಅಜ್ಜಂಪುರ ಅಮೃತ್ ಮಹಲ್ ಕಾವಲ್‌ನಲ್ಲಿ ರಾಸುಗಳನ್ನು ಬಹಳ ಅಚ್ಚುಕಟ್ಟಾಗಿ ನೋಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ರಾಸುಗಳ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಸಂಬAಧಿಸಿದರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕಡೂರು ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಮಾತನಾಡಿ, ರಾಜ್ಯದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ರಾಸುಗಳ ಹರಾಜಿನಲ್ಲಿ ಭಾಗವಹಿಸಿರುವುದು ಬಹಳ ವಿಶೇಷವಾಗಿದೆ. ಇದುವರೆಗೂ ಯಾರೂ ಸಹ ರಾಸುಗಳ ಹರಾಜಿನಲ್ಲಿ ಭಾಗವಹಿಸಿರುವ ಉದಾಹರಣೆಗಳಿಲ್ಲ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯು ಮಲೆನಾಡು, ಬಯಲು ಸೀಮೆ ಪ್ರದೇಶವನ್ನು ಹೊಂದಿರುತ್ತದೆ. ಈ ಭಾಗದಲ್ಲಿ ಹೈನುಗಾರಿಕೆ ಮೂಲಕ ಬಹಳಷ್ಟು ರೈತರು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ತಿಳಿಸಿದರು.

ನಮ್ಮ ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಹಾಲು ಶಿವಮೊಗ್ಗ ಹಾಗೂ ಹಾಸನ ಡೈರಿಗೆ ಹೋಗುತ್ತಿದೆ. ಹಾಗಾಗಿ ಒಂದು ಜಿಲ್ಲೆಗೆ ಡೈರಿ ಸ್ಥಾಪನೆಗೆ ಬೇಕಾಗಿರುವ ಹಾಲು ಉತ್ಪಾದನೆ ನಮ್ಮ ಜಿಲ್ಲೆಯಲ್ಲೂ ಆಗುತ್ತಿದೆ. ಹಾಗಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಡೈರಿ ಸ್ಥಾಪನೆಯಾದಲ್ಲಿ ಹೈನುಗಾರಿಕೆಯನ್ನು ನಂಬಿರುವ ರೈತರಿಗೆ ಸಹಕಾರಿಯಾಗುತ್ತದೆ ಎಂದರು.

ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾದ ಜಿಲ್ಲೆಗೊಂದು ಪ್ರತ್ಯೇಕವಾಗಿ ಡೈರಿ ಸ್ಥಾಪನೆ ಮಾಡುವಂತೆ ಜಿಲ್ಲೆಯ ಶಾಸಕರುಗಳ, ಜನಪ್ರತಿನಿಧಿಗಳ, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಪರವಾಗಿ ಸಚಿವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ನಯಾಜ್, ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಮಲ್ಲೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್ ಬೆಟ್ಟಗೆರೆ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್ ಕುಮಾರ್ ಮತ್ತಿತರರಿದ್ದರು.