ಜಿಲ್ಲೆ

ಪಹಲ್ಗಾಮ್‌ನಲ್ಲಿ ಮಡಿದವರಿಗೆ ಸಂತಾಪ

ಅರಕಲಗೂಡು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಮಡಿದವರಿಗೆ ತಾಲೂಕು ಯುವ ಕಾಂಗ್ರೆಸ್ ಘಟಕದ ವತಿಯಿಂದ ಸೋಮವಾರ ಸಂತಾಪ ಸೂಚಿಸಲಾಯಿತು.

ಪಟ್ಟಣದ ಅನಕೃ ವೃತ್ತದಲ್ಲಿ ಮೋಂಬತ್ತಿ ಬೆಳಗಿಸಿ ಭಯೋತ್ಪಾದಕ ಕೃತ್ಯ ಖಂಡಿಸಿ ಘೋಷಣೆ ಕೂಗಿದರು. ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ನಯನ್ ಮಾತನಾಡಿ, ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿರುವುದು ಖಂಡನೀಯ. ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಟಿ.ಸೋಮಶೇಖರ್, ಉಪಾಧ್ಯಕ್ಷ ಲಕ್ಷ್ಮಣ್, ಶಹಬಾಜ್ ಪಾಷಾ, ಪಪಂ ಉಪಾಧ್ಯಕ್ಷ ಸುಭಾನ ಷರೀಫ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸತ್ಯರಾಜ್, ಧರ್ಮ, ಕೆಡಿಪಿ ಸದಸ್ಯ ಸುರೇಶ್, ಮುಖಂಡರಾದ ಲಿಂಗರಾಜು, ಉಮೇಶ್, ಕಾರ್ತಿಕ್, ದೊಡ್ಡಕಾಡಣ್ಣ, ರಂಗನಾಥ್ ಇತರರಿದ್ದರು.