ಚಾಮರಾಜನಗರ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರಿಗೆ ಬುಧವಾರ ಪೊಲೀಸರು ಮಗುವನ್ನು ಹಸ್ತಾಂತರಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಮಗುವನ್ನು ಭಿಕ್ಷೆ ಬೇಡುವ ಉದ್ದೇಶದಿಂದ ಅಪಹರಿಸಿಕೊಂಡು ಹೋಗಿರುವ ಬಗ್ಗೆ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಿದ ಪೊಲೀಸರು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಗುವನ್ನು ಅಪಹರಿಸಿದ್ದ ರಾಧಾ ಎಂಬುವವಳನ್ನು ಮಂಗಳವಾರ ಬಂಧಿಸಿದ್ದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ರಾಮನಗರ ಮೂಲದ ಅನಿತಾ ಮತ್ತು ಅವರ ತಾಯಿಗೆ ಮಗುವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಧರ್ಮೇಶ್, ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಾಗರ್ ಹಾಗೂ ಇತರರು ಹಾಜರಿದ್ದರು.