ಜಿಲ್ಲೆ

ಪಾಲಿಕೆ ಆರೋಗ್ಯ ಅಧಿಕಾರಿ ಡಾ.ವಿವೇಕಾನಂದ ಅಮಾನತು

ಕಲಬುರಗಿ: ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ನಗರದಲ್ಲಿ ನಾಯಿ ಕಡಿತಕ್ಕೆ ಒಳಗಾದ ಆರು ವರ್ಷದ ಬಾಲಕಿ, ಗಂಭೀರವಾಗಿ ಗಾಯಗೊಂಡಿದ್ದು, ಐಸಿಯು ವಾರ್ಡ್ ನಲ್ಲಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದು, ಹತ್ತು ಲಕ್ಷ ಪರಿಹಾರ ನೀಡಬೇಕೆಂದು ಪಾಲಿಕೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನ ಅಜ್ಮಲ್ ಗೋಲಾ ಒತ್ತಾಯಿಸಿದರು.

ನಾಯಿ ಕಡಿತ ಹಾವಳಿ ಕಳೆದ 6 ತಿಂಗಳಿಂದ ಅವ್ಯಾಹತವಾಗಿ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪಾಲಿಕೆ ಆರೋಗ್ಯ ಅಧಿಕಾರಿ ಹಾಗೂ ಪರಿಸರ ಎಂಜಿನಿಯರ್ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಮುಂದಿನ ದಿನಗಳಲ್ಲಿ ನಾಯಿ ಕಡಿತ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ನಿಟ್ಟಿನಲ್ಲಿ ಸಹಾಯ ಮಾಡುವುದಾಗಿ ನಗರಾಭಿವೃದ್ಧಿ ಸಚಿವರು ಹೇಳಿದ್ದಾರೆಂದು ಸಭೆ ಗಮನಕ್ಕೆ ತಂದರು.

ಸಭೆಯಲ್ಲಿ ಆರೋಗ್ಯ ವಿಭಾಗದ ಹಾಗೂ ಪರಿಸರ ವಿಭಾಗದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಸದಸ್ಯರೆಲ್ಲರೂ ಒತ್ತಾಯಿಸಿದರು.

ಅಮಾನತು: ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದ ನಂತರ ಪಾಲಿಕೆ ಆರೋಗ್ಯಾಧಿಕಾರಿ ಡಾ. ವಿವೇಕಾನಂದ ಅವರನ್ನು ಸಭೆಯಲ್ಲಿ ಅಮಾನತು ನಿರ್ಧಾರವನ್ನು ಆಯುಕ್ತರು ಪ್ರಕಟಿಸಿದರು.

ತಕ್ಷಣ ಕರ್ತವ್ಯದಿಂದ ಬಿಡುಗಡೆ‌ ಮಾಡುವುದಾಗಿಯೂ ತಿಳಿಸಿದರು.