ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಸ್ವತ್ತುಗಳಿಗೆ ಪಾಲಿಕೆ ವಲಯ ಆಯುಕ್ತರ ಕಚೇರಿಗಳಿಗೆ ನಿಗದಿತ ಅರ್ಜಿ ಸಲ್ಲಿಸಿ ೭ ದಿನದಲ್ಲಿಯೇ ಇ-ಖಾತಾ ಪಡೆಯಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ತಿಳಿಸಿz್ದÁರೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಬಾಕಿ ಇರುವ ಎಲ್ಲ ಆಸ್ತಿಗಳಿಗೆ ಮೇ ೧೦ ರೊಳಗೆ ಇ-ಖಾತಾ ನೀಡಲು ಉz್ದÉÃಶಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಅನಧಿಕೃತ ಸ್ವತ್ತುಗಳಿಗೂ ಇ-ಖಾತಾ ನೀಡುವ ಸಂಬAಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯ ಪಾವತಿಸಿ ಇ-ಖಾತಾ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎ ರಿಜಿಸ್ಟರ್‌ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬAಧಿಸಿದAತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರ, ದಾನಪತ್ರ, ವಿಭಾಗ ಪತ್ರಗಳು, ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕು ಪತ್ರ, ಮಂಜೂರಾತಿ ಪತ್ರ, ಕಂದಾಯ ಇಲಾಖೆಯಿಂದ ೯೪ ಸಿಸಿ ಅಡಿ ನೀಡಲಾದ ಹಕ್ಕು ಪತ್ರ, ಸP್ಷÀಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಜಿಪಿಎಸ್ ವಿವರದ ಫೋಟೋ ಹಾಗೂ ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಬಿ ರಿಜಿಸ್ಟರ್‌ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ಪಡೆಯಲು ಆಸ್ತಿಗೆ ಸಂಬAಧಿಸಿದAತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ೨೦೨೪ ಸೆ.೧೦ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರ, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಜಿಪಿಎಸ್ ವಿವರದ ಫೋಟೋ ಹಾಗೂ ಮಾಲೀಕರ ಗುರುತಿನ ದಾಖಲೆ ಪ್ರತಿ ಲಗತ್ತಿಸಿ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತರು ತಿಳಿಸಿz್ದÁರೆ. ಮಾಹಿತಿಗೆ ಪಾಲಿಕೆ ಕಚೇರಿಯನ್ನು ಸಂಪರ್ಕಿಸಲು ಕೋರಿದ್ದಾರೆ.