ಜಿಲ್ಲೆ

ಪಾಲಿಬೆಟ್ಟ ಸರ್ಕಾರಿ ಶಾಲೆಯಲ್ಲಿ ತ್ರಿವರ್ಣ ಕಾರ್ಯಕ್ರಮ

ಸಿದ್ದಾಪುರ: ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ರಾಷ್ಟ್ರ ಲಾಂಛನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಪಾಲಿಬೆಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತ್ರಿವರ್ಣ ಕಾರ್ಯಕ್ರಮವನ್ನು ನಡೆಯಿತು.

ನಿವೃತ್ತ ಶಿಕ್ಷಕರು ಹಾಗೂ ಸ್ಕೌಟ್ ಗೈಡ್ಸ್‌ನ ಸಂಯೋಜಕ ಜಿಮ್ಮಿ ಸಿಕ್ವೇರ ಅವರು ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ರಾಷ್ಟ್ರ ಲಾಂಛನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.

ಉಪಾಧ್ಯಕ್ಷ ಪುತ್ತಂ ಪ್ರದೀಪ್, ಕಾರ್ಯದರ್ಶಿ ಎ.ಎಸ್.ಮುಸ್ತಫ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಪೊನ್ನಂಪೇಟೆ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎನ್.ದಿನೇಶ್, ಕೋಶಾಧಿಕಾರಿ ಅರುಣ್‌ಕುಮಾರ್, ನಿರ್ದೇಶಕ ಅಂಥೋಣಿ, ಪ್ರಭಾರ ಮುಖ್ಯ ಶಿಕ್ಷಕಿ ಮಮತಾ ಕಾಮತ್, ಶಿಕ್ಷಕಿ ನಯನಕುಮಾರಿ, ಶಿಕ್ಷಕರಾದ ಮದನ್, ಸವಿತಾ ಇದ್ದರು.