ಚಿತ್ರದುರ್ಗ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಕನ್ನಡ ಜಾಣ-ಜಾಣೆಯರ ವೇದಿಕೆ ಸಹಯೋಗದಲ್ಲಿ ಸೆಪ್ಟೆಂಬರ್ ಕೊನೆ ವಾರ ಹಾಸನ ಜಿಲ್ಲೆಯಲ್ಲಿ ಏರ್ಪಡಿಸಲಿರುವ ರಾಜ್ಯಮಟ್ಟದ 3 ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರಕ್ಕೆ ಆ.17ರೊಳಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು http://karnatakasahithyaacademy.org ಮೂಲಕ ಅರ್ಜಿ ನಮೂನೆ, ವಿವರ ಪಡೆಯಬಹುದಾಗಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಎನ್.ಕರಿಯಪ್ಪ ತಿಳಿಸಿದ್ದಾರೆ.