ಜಿಲ್ಲೆ

ಪಿಎಸ್‌ಐ ಅಶ್ವಿನಿ ಅನಂತಪುರ ಅಮಾನತು

reportermys

ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸುವ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ನಗರದ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಕುರಿತು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸೋಮವಾರ ಆದೇಶ ಹೊರಡಿಸಿದ್ದಾರೆ. ಎಫ್‌ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಜಿಲ್ಲೆಯ ಸಂಗಮೇಶ್ ಝಳಕಿ ಎಂಬುವರ ಜತೆ ಆರೋಪಿ ಪಿಎಸ್‌ಐ ಮಾತನಾಡಿದ್ದಾರೆ ಎನ್ನಲಾದ ಮೊಬೈಲ್ ಹಾಗೂ ವಾಟ್ಸ್‌ಆ್ಯಪ್ ಆಡಿಯೋ ಸಂಭಾಷಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್ ಸ್ಟೇಟ್‌ಮೆಂಟ್ ಕೂಡ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು.

ಈ ಕುರಿತು ಸಂಚಾರ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಆರೋಪಗಳು ಮೇಲ್ನೋಟಕ್ಕೆ ನೈಜವೆಂದು ತಿಳಿದುಬಂದ ಹಿನ್ನೆಲೆಯಲ್ಲಿ ಪಿಎಸ್‌ಐ ಅಶ್ವಿನಿ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರುವಂತೆ ಅಮಾನತು ಮಾಡಲಾಗಿದೆ.