ಮೈಸೂರು: ಜ್ಞಾನಬುತ್ತಿ ಸಂಸ್ಥೆಯಿಂದ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ.
ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಂಸ್ಥೆಯಿಂದ ನ.12ರಿಂದ ನಿತ್ಯ ಸಂಜೆ 5.30ರಿಂದ 7.30ರವರೆಗೆ ತರಬೇತಿ ನೀಡಲಾಗುವುದು. ಆಸಕ್ತರು ಸಂಯೋಜಕ ಕೆ.ವೈ.ನಾಗೇಂದ್ರ (ಮೊ: 8296788251) ಅವರನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಚ್.ಬಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.