ಜಿಲ್ಲೆ

ಪಿಯಸಿ ಪೂರಕ ಪರೀಕ್ಷೆ ನೋಂದಣಿ ಆರಂಭ

ಚಿತ್ರದುರ್ಗ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2ರ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಈ ಪರೀಕ್ಷೆಗೆ, 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ನೋಂದಾಯಿಸಲು ಅರ್ಹರಿರುತ್ತಾರೆ.

ಈ ಪರೀಕ್ಷೆಯಲ್ಲಿ ಫಲಿತಾಂಶವನ್ನು ತಿರಸ್ಕರಿಸಲು ಅವಕಾಶ ಇರುವುದಿಲ್ಲ. ಪರೀಕ್ಷೆಗೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಠಿಠಿ://ಛಿಚಿ. ಚ್ಟ ್ಞಠಿ.ಜಟ.ಜ್ಞಿ ನಲ್ಲಿ ಪ್ರಕಟಿಸಲಾಗಿದೆ ಎಂದು ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.