ಕುಶಾಲನಗರ ಸಮೀಪದ ಕೂಡಿಗೆ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯಮಶೀಲತೆ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ಕಾಲೇಜಿನ ಹಿರಿಯ ಉಪನ್ಯಾಸಕ ನಾಗಪ್ಪ ಏಲಕ್ಕಿಕಟ್ಟೆ ಮತ್ತಿತರರು ಹಾಜರಿದ್ದರು. 
ಜಿಲ್ಲೆ

ಪಿಯು ಹಂತದಲ್ಲಿ ನಿಗಾ ಹೆಚ್ಚಿರಿಲಿ

ಕುಶಾಲನಗರ: ಪ್ರತಿ ವಿದ್ಯಾರ್ಥಿಗೆ ಪದವಿ ಪೂರ್ವ ವ್ಯಾಸಂಗವು ಬದುಕಿನ ಗುರಿಯನ್ನು ಸ್ಪಷ್ಟಪಡಿಸುತ್ತದೆ. ಆದ್ದರಿಂದ, ಈ ಹಂತದಲ್ಲಿ ಮಕ್ಕಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಉಮಾ ಸಲಹೆ ನೀಡಿದರು.

ಕೂಡಿಗೆ ಪಿಯು ಕಾಲೇಜಿನಲ್ಲಿ ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪಿಯು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉದ್ಯಮಶೀಲತೆ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಸಮರ್ಪಕ ಮಾಹಿತಿ ಪಡೆಯುವ ಜತೆಗೆ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಇಲಾಖೆ ಅಧಿಕಾರಿ ರೂಪ ಮಾತನಾಡಿ, ಇಲಾಖೆಯ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜ್ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ, ಇಲಾಖೆ ಸಹಾಯಕ ನಿರ್ದೇಶಕಿ ರೇಖಾ ಗಣಪತಿ, ಕಾಲೇಜಿನ ಹಿರಿಯ ಉಪನ್ಯಾಸಕ ನಾಗಪ್ಪ ಏಲಕ್ಕಿಕಟ್ಟೆ ಉಪನ್ಯಾಸಕರಾದ ರಮೇಶ್, ಹನುಮರಾಜ್, ರವೀಂದ್ರ ಇತರರು ಇದ್ದರು.