ಹಾಸನ: ಶ್ರೀ ಕ್ಷೇತ್ರ ಕುಂದೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪುನರ್ ನಿರ್ಮಾಣಗೊಂಡ ದೇವಸ್ಥಾನಗಳ ಲೋಕಾರ್ಪಣೆ ಮತ್ತು ಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವ ಡಿಸೆಂಬರ್ 4 ರಿಂದ ಆರಂಭಗೊಂಡು ಸೋಮವಾರ ಸಮಾಪ್ತಿಗೊಂಡಿತು.
ಶ್ರೀ ಶಂಭುನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯಕ್ರಮ ನೆರವೇರಿದ್ದು, ಕುಂದೂರು ಮಠದ ಈ ಹಿಂದಿನ ಎಲ್ಲ ಪೀಠಾಧ್ಯಕ್ಷರ ಪುಣ್ಯಾರಾಧನೆ ಕಾರ್ಯ ನೆರೆವೇರಿತು.
ಡಿಸೆಂಬರ್ 4 ರಂದು ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಿದ ಜಾತ್ರಾ ಮಹೋತ್ಸವ ಅತ್ಯಂತ ಯಶಸ್ಸು ಕಂಡಿತು. ಪ್ರತಿ ದಿನ ಧಾರ್ಮಿಕ ವಿಧಿ ವಿಧಾನಗಳ ಜತೆಗೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ವೇಳೆ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಶ್ರೇಯಸ್ ಪಟೇಲ್, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಚ್.ಎಲ್. ಮಲ್ಲೇಶ್ ಗೌಡ ಇನ್ನಿತರರು ಪಾಲ್ಗೊಂಡಿದ್ದರು.