ಮೂಡಲಗಿ ಪುರಸಭೆ ಕಾರ್ಯಾಲಯದ ಮುಂದೆ ಕೆಆರ್‌ಎಸ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟಿಸಿ ಬಳಿಕ ಪ್ರಭಾರ ಮುಖ್ಯಾಧಿಕಾರಿ ಸಿ.ಬಿ.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಈರಪ್ಪ ಢವಳೇಶ್ವರ, ಅಬ್ದುಲ್ ಪೈಲವಾನ, ಲಕ್ಷ್ಮಣ ಮೆಳ್ಳಿಗೇರಿ ಇತರರಿದ್ದರು. 
ಜಿಲ್ಲೆ

ಪುರಸಭೆಗೆ ಅವಿರೋಧ ಆಯ್ಕೆ

ರಾಮದುರ್ಗ, ಬೆಳಗಾವಿ: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ರಘುನಾಥ ರೇಣಕೆ, ಉಪಾಧ್ಯಕ್ಷರಾಗಿ ನಾಗರಾಜ ಕಟ್ಟಿಮನಿ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು ಚುನಾಯಿತ 27 ಸದಸ್ಯರನ್ನು ಹೊಂದಿದ ಪುರಸಭೆಗೆ ಬಿಜೆಪಿ ಸಂಪೂರ್ಣ ಬಹುಮತ ಹೊಂದಿದ್ದು, ಶಾಸಕ ಮಹಾದೇವಪ್ಪ ಯಾದವಾಡ ಅವರ ಮಾರ್ಗದರ್ಶನದಲ್ಲಿ ನಡೆದಿದ್ದ ಒಪ್ಪಂದದಂತೆ ಈ ಹಿಂದಿನ ಅಧ್ಯಕ್ಷ ಶಂಕ್ರೆಪ್ಪ ಬೆನ್ನೂರ, ಉಪಾಧ್ಯಕ್ಷ ರಾಘವೇಂದ್ರ ದೊಡಮನಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಅವಿರೋಧ ಆಯ್ಕೆ ನಡೆಯಿತು.
ಸಹಿ ಹಾಕದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ಕಾಂಗ್ರೆಸ್ ಸದಸ್ಯೆ ರಾಜೇಶ್ವರಿ ಮೆಟಗುಡ್ಡ ಅವರ ನಾಮಪತ್ರ ತಿರಸ್ಕೃತವಾಯಿತು. ಕಾಂಗ್ರೆಸ್‌ನ ಸದಸ್ಯ ದುರಗಪ್ಪ ಬಂಡಿವಡ್ಡರ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ ನಾಮಪತ್ರ ಹಿಂಪಡೆದರು. ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ೋಷಿಸಿದರು. ಸಹಾಯಕ ಚುನಾವಣಾಧಿಕಾರಿಯಾಗಿ ಪುರಸಭೆ ಮುಖ್ಯಾಧಿಕಾರಿ ರವಿ ಬಾಗಲಕೋಟ ಕಾರ್ಯನಿರ್ವಹಿಸಿದರು. ಬೆಳಗಾವಿ ಸಂಸದೆ ಮಂಗಲ ಸುರೇಶ ಅಂಗಡಿ ಮಾತನಾಡಿ, ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರು ಸರ್ಕಾರ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಅಭಿವೃದ್ಧಿ ಮಾಡಿ ಜನರ ಋಣ ತೀರಿಸಬೇಕೆಂದರು.

ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ಈಗಾಗಲೇ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಸಾಕಷ್ಟು ಅನುದಾನ ಮಂಜೂರು ಮಾಡಿಸಿದ್ದೇನೆ. ಬರುವ ದಿನಗಳಲ್ಲಿ ಪಟ್ಟಣ ಅಭಿವೃದ್ಧಿಗೆ ಇನ್ನಷ್ಟು ಶ್ರಮಿಸಲಿದ್ದೇನೆ. ನೂತನ ಅಧ್ಯಕ್ಷರು ಹಾಗೂ ಸದಸ್ಯರು ಒಟ್ಟಾಗಿ ಜನರ ಸೇವೆ ಮಾಡಬೇಕೆಂದು ಕಿವಿಮಾತು ಹೇಳಿದರು.

ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಮುಖಂಡರಾದ ಡಾ.ಕೆ.ವಿ. ಪಾಟೀಲ, ಬಿಜೆಪಿ ಮಂಡಲ ಅಧ್ಯಕ್ಷ ರಾಜೇಶ ಬೀಳಗಿ, ಶಿವಾನಂದ ದಡೇದ, ಪುರಸಭೆ ಸದಸ್ಯರು ಹಾಗೂ ಬಿಜೆಪಿ ಮುಖಂಡರು ಇದ್ದರು.