ಚನ್ನರಾಯಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ರಾಧಾ ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಸಿ.ಎನ್.ಬಾಲಕೃಷ್ಣ, ಜೆ.ಸಿ.ಧರಣೀಶ್, ಜಿ.ಆರ್.ಸುರೇಶ್, ಕೆ.ಎನ್.ಬನಶಂಕರಿ ಇದ್ದರು. 
ಜಿಲ್ಲೆ

ಪುರಸಭೆಗೆ ರಾಧಾ ಮಂಜುನಾಥ್ ಅಧ್ಯಕ್ಷೆ

ಚನ್ನರಾಯಪಟ್ಟಣ: ಪಟ್ಟಣದ ಪುರಸಭಾ ಅಧ್ಯಕ್ಷ ಸ್ಥಾನಕ್ಕೆ ರಾಧಾ ಮಂಜುನಾಥ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾದರು.

ಜಿ.ಅರ್.ಸುರೇಶ್ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ರಾಧಾ ಮಂಜುನಾಥ್ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಅವರನ್ನೇ ಅವಿರೋಧ ಆಯ್ಕೆ ಮಾಡಲಾಯಿತು.

ಅಧ್ಯಕ್ಷ ಸ್ಥಾನವು ಬಿಸಿಎಂ(ಬಿ) ವರ್ಗಕ್ಕೆ ಮೀಸಲಾಗಿದ್ದು, 20ನೇ ವಾರ್ಡ್‌ನಿಂದ ಪುರಸಭೆಗೆ ಆಯ್ಕೆಯಾಗಿದ್ದ ರಾಧಾ ಮಂಜುನಾಥ್ ಸ್ವರ್ಧೆಗಿಳಿದು ಅವಿರೋಧ ಆಯ್ಕೆಯಾದರು. ತಹಸೀಲ್ದಾರ್ ಬಿ.ಎಂ.ಗೋವಿಂದರಾಜು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ನೂತನ ಅಧ್ಯಕ್ಷೆ ರಾಧಾ ಮಂಜುನಾಥ್ ಅವರನ್ನು ಶಾಸಕ ಸಿ.ಎನ್.ಬಾಲಕೃಷ್ಣ ಅಭಿನಂದಿಸಿದರು. ಉಪಾಧ್ಯಕ್ಷ ಜೆ.ಸಿ.ಧರಣೀಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಎನ್.ಬನಶಂಕರಿ, ಮಾಜಿ ಅಧ್ಯಕ್ಷ ಜಿ.ಆರ್.ಸುರೇಶ್, ಪುರಸಭಾ ಮುಖ್ಯಾಧಿಕಾರಿ ಎಚ್.ಟಿ.ಕೃಷ್ಣಮೂರ್ತಿ, ಸದಸ್ಯರು ಇದ್ದರು.