ಹನೂರು: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಆರ್. ನರೇಂದ್ರ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ಬಸವರಾಜು, ತಾಪಂ ಅಧ್ಯಕ್ಷೆ ಸವಿತಾ, ಸದಸ್ಯೆ ರುಕ್ಮಿಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಾನ್ ಬ್ರಿಟ್ಟೊ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ, ಬಿಇಒ ಟಿ.ಆರ್ ಸ್ವಾಮಿ, ಬಿಆರ್ ಸಿ ಕ್ಯಾತ ಹಾಗೂ ಇನ್ನಿತರರು ಹಾಜರಿದ್ದರು.