ಜಿಲ್ಲೆ

ಪೂರ್ಣ ಮಾಹಿತಿಯೊಂದಿಗೆ ಸಭೆ ಬನ್ನಿ

Yadgiri - Laxmikanth Kulkarni


ಯಾದಗಿರಿ: ಉಪ ಲೋಕಾಯುಕ್ತ ನ್ಯಾಯಮೂತರ್ಿ ಕೆ.ಎನ್.ಫಣೀಂದ್ರ ಅವರು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆಯ ಸಂಪೂರ್ಣ ಮಾಹಿತಿ ಇಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಸೂಚನೆ ನೀಡಿದ್ದಾರೆ.


ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ನ.18 ಮೂರು ದಿನಗಳ ಕಾಲ ಉಪ ಲೋಕಾಯುಕ್ತರು ಜಿಲ್ಲಾ ಪ್ರವಾಸದಲ್ಲಿ ಇರಲಿದ್ದಾರೆ. ಈ ವೇಳೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ವಿಚಾರಣೆ ನಡೆಸುವುದರ ಜತೆಗೆ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು, ಪ್ರಕರಣಗಳ ವಿಚಾರಣೆ ಹಾಗೂ ಸಭೆ ನಡೆಸಲಿದ್ದಾರೆ ಎಂದರು.
ಹೀಗಾಗಿ ತಮ್ಮ ಕಚೇರಿಗಳಲ್ಲಿ ಬಾಕಿ ಇರುವ ಎಲ್ಲ ಕಡತಗಳನ್ನು, ಸಾರ್ವಜನಿಕರಿಂದ ಸ್ವೀಕೃತಗೊಂಡ ಅಜರ್ಿಗಳನ್ನು ಕೂಡಲೇ ವಿಲೇವಾರಿ ಮಾಬೇಕು. ಅಲ್ಲದೆ ಅಧಿಕಾರಿಗಳು ಅಗತ್ಯ ಪೂರ್ವ ಸಿದ್ದತೆಯೊಂದಿಗೆ ಹಾಜರಿರುವಂತೆ ಸೂಚಿಸಿದರು.

ಜಿಪಂ ಸಿಇಒ ಗರೀಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಶರಣ ಬಸವರಾಜ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಇದ್ದರು.