ಜಿಲ್ಲೆ

ಪೂರ್ಣಗೊಳ್ಳದ ಕಾಮಗಾರಿಯಿಂದ ಕಿರಿಕಿರಿ, ಸಂಪರ್ಕ ರಸ್ತೆಗಳನ್ನು ಬಂದ್ ಮಾಡಿದ ಕೆಐಎಡಿಬಿ ವಾಹನ ಸವಾರರಿಗೆ ನಿತ್ಯವೂ ನರಕ

ದಾಬಸ್‌ಪೇಟೆ: ಸೋಂಪುರ ಹೋಬಳಿ ಅವೇರಹಳ್ಳಿ ಕೈಗಾರಿಕಾ ಪ್ರದೇಶದ 4 ಮತ್ತು 5ನೇ ಹಂತದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೆಐಎಡಿಬಿ ಪೂರ್ಣಗೊಳಿಸಿಲ್ಲ. ಇದರಿಂದಾಗಿ ಈ ಭಾಗದ ಜನರು ಸಂಚಾರಕ್ಕೆ ಪರದಾಡುವಂತಾಗಿದೆ.

ರಸ್ತೆಗೆ ಸಂಪರ್ಕಿಸುವ ಲೋಕೋಪಯೋಗಿ ಇಲಾಖೆಯ ರಸ್ತೆಗಳನ್ನು ಕಾಮಗಾರಿ ಉದ್ದೇಶದಿಂದ ಬಂದ್ ಮಾಡಲಾಗಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳದ ಪರಿಣಾಮ ಸಾರ್ವಜನಿಕರು ನಿತ್ಯವೂ ನರಕ ಅನುಭವಿಸುವಂತಾಗಿದೆ.

ರಸ್ತೆ ಕಾಮಗಾರಿ ರಾಷ್ಟ್ರೀಯ ಹೆದ್ದಾರಿ 4ರ ಕೆಂಗಲ್ ಕೆಂಪೋಹಳ್ಳಿಯಿಂದ ರಾಜ್ಯ ಹೆದ್ದಾರಿ 3ರ ಶಾರದಾ ಕ್ರಾಸ್ ಸಂಪರ್ಕಿಸುವ ರಸ್ತೆಯನ್ನು ಪೂರ್ಣಪ್ರಮಾಣದಲ್ಲಿ ಮಾಡಿಲ್ಲ. ಅಲ್ಲಲ್ಲಿ ಜಲ್ಲಿಕಲ್ಲು ಸುರಿಯಲಾಗಿದೆ. ಇದೇ ಮಾರ್ಗದ ಅವೇರಹಳ್ಳಿ ಸಂಪರ್ಕಿಸುವ ರಸ್ತೆಯ ಕಾಮಗಾರಿಯನ್ನು ಕೆಐಎಡಿಬಿಗೆ ವಹಿಸಲಾಗಿದ್ದು, ಕಾಮಗಾರಿ ನಡೆಸಿಲ್ಲ.

ಕೆಐಎಡಿಬಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಸಂಪರ್ಕ ರಸ್ತೆ ಬಂದ್ ಮಾಡಿರುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಪ್ರಕಾಶ್, ಸ್ಥಳೀಯ ಲೋಕೋಪಯೋಗಿ ಇಲಾಖೆಯಿಂದ ಕೋಟ್ಯಂತರ ಹಣ ವ್ಯಯಮಾಡಿ ಕೆಂಗಲ್ ಕೆಂಪೋಹಳ್ಳಿಯಿಂದ ಶಾರದಾ ಕ್ರಾಸ್‌ವರೆಗೂ ರಸ್ತೆ ನಿರ್ಮಾಣ ಮಾಡಲಾಗಿದೆ. ಈ ರಸ್ತೆಯನ್ನು ಬಂದ್ ಮಾಡುವುದು ಸರಿಯಲ್ಲ. ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವೇ ಲೋಕೋಪಯೋಗಿ ರಸ್ತೆಯಲ್ಲೇ ಸಂಚಾರಕ್ಕೆ ಅವಕಾಶ ನೀಡಬೇಕು. ಗಾಯತ್ರಿ ಮರಿಯಪ್ಪ ಶಿವಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಸ್ತೆಯನ್ನು ಬಂದ್ ಮಾಡಿರುವುದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಪರಿಶೀಲಿಸಿ ಸಮಸ್ಯೆ ಪರಿಹರಿಸಲಾಗುವುದು. ನಟರಾಜು,ಎಇಇ ಲೋಕೋಪಯೋಗಿ ಇಲಾಖೆ ಮಳೆಗಾಲವಾದ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ನಂತರ ರಸ್ತೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಲಾಗುವುದು. ಶಿವಲಿಂಗಯ್ಯ ಕೆಐಎಡಿಬಿ ಇಂಜಿಯರ್