ಜಿಲ್ಲೆ

ಪೆಟ್ರೋಲಿಯಂ ಉತ್ಪನ್ನ ದರ ಏರಿಕೆ ಕರುಣೆ ಇಲ್ಲದ ಕೇಂದ್ರ ಸರ್ಕಾರ ಮಾಜಿ ಸಚಿವ ರಮಾನಾಥ ರೈ

reportermng

ಮಂಗಳೂರು: ಪೆಟ್ರೋಲ್, ಡೀಸೆಲ್‌, ಗ್ಯಾಸ್ ದರ ಏರಿಕೆಯಿಂದ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರಕ್ಕೆ ಕರುಣೆ ಇಲ್ಲದಂತಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಆಗಿದೆ. ಜನರನ್ನು ಭಾವನಾತ್ಮಕವಾಗಿ ವಂಚಿಸುತ್ತಿದೆ.

ಬಡವರ ಕಿಸೆಗೆ ಕತ್ತರಿ ಹಾಕಿ ಕಾರ್ಪೋರೆಟ್ ಕಂಪೆನಿಗಳನ್ನು ಬೆಳೆಸುತ್ತಿದೆ. ನಿರುದ್ಯೋಗ ತಾಂಡವವಾಡುತ್ತಿದೆ. ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.