ಮಂಗಳೂರು: ನ್ಯಾಯಾಲಯ ಕಟ್ಟಡದ ಆರನೇ ಮಹಡಿಯಿಂದ ನೆಲಕ್ಕೆ ಜಿಗಿದು ಪೊಕ್ಸೊ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉಳ್ಳಾಲದ ಕಿನ್ಯ ನಿವಾಸಿ ರವಿರಾಜ್ (31) ಆತ್ಮಹತ್ಯೆ ಮಾಡಿಕೊಂಡವರು. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು.
ನ್ಯಾಯಾಲಯಕ್ಕೆ ಹಾಜರಾಗಲು ಪೊಲೀಸರ ಜತೆ ಆಗಮಿಸಿದ್ದ ಆರೋಪಿ ಪೊಲೀಸರ ಕಣ್ಣು ತಪ್ಪಿಸಿ ನೆಲಕ್ಕೆ ಹಾರಿದ್ದಾನೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಎರಡು ವರ್ಷದ ಹಿಂದೆಯೂ ಇದೇ ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.