ಜಿಲ್ಲೆ

ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಅಗತ್ಯ

ಯಾದಗಿರಿ: ಮಕ್ಕಳಿಗೆ ಕಾನೂನಿನ ಬಗ್ಗೆ ಶಾಲಾ ಹಂತದಲ್ಲೇ ತಿಳಿವಳಿಕೆ ಹಾಗೂ ಜ್ಞಾನ ಮೂಡಿಸುವುದು ಇಂದಿನ ದಿನಗಳಲ್ಲಿ ಅವಶ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಸಾಹೀಲ್ ಅಹ್ಮದ್ ಎಸ್.ಕುನ್ನಿಭಾವಿ ತಿಳಿಸಿದರು.

ನಗರದ ಕೋಲಿವಾಡದ ಸಕರ್ಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರೀತಿ,ಪ್ರೇಮ ಎಂಬ ಮೋಹಕ್ಕೆ ಬಿದ್ದು ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹ ಮತ್ತು ಲೈಂಗಿಕ ಕಿರುಕುಳದಂಥ ಘಟನೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅದಕ್ಕಾಗಿ ಪೋಕ್ಸೊ ಕಾಯ್ದೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್. ಹೊನೋಲೆ ಮಾತನಾಡಿ, ಭಾರತದ ಪ್ರಜೆಗಳಾದ ನಮಗೆ ಸಂವಿಧಾನವು ಅಮೂಲ್ಯ ಮೂಲಭೂತ ಹಕ್ಕುಗಳನ್ನು ನೀಡಿದೆ. ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಹಾಗೂ ಗೌರವಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಆಗಿದೆ. ಕಾನೂನಿನ ಬಗ್ಗೆ ಮಕ್ಕಳಲ್ಲಿ ಪ್ರಜ್ಙೆ, ಕಡ್ಡಾಯ ಶಿಕ್ಷಣ ಜನ್ಮಸಿದ್ಧ ಹಕ್ಕುಗಳಾಗಿವೆ. ಉತ್ತಮ ರಾಷ್ಟ ನಿಮರ್ಾಣ ಹಾಗೂ ದೇಶದ ಪ್ರಗತಿಯು ಮಕ್ಕಳ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.