Gavel on desk. Isolated with good copy space. Dramatic lighting. 
ಜಿಲ್ಲೆ

ಪೋಕ್ಸೋ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಚಿತ್ರದುರ್ಗ: ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಪೋಕ್ಸೋ ಪ್ರಕರಣದ ಅಪರಾಧಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಜೈಲು ಶಿಕ್ಷೆ, 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಜಿಲ್ಲೆಯ ಬತ್ತಯ್ಯನಹಟ್ಟಿ ಗ್ರಾಮದ ಪುನೀತ್‌ಕುಮಾರ್ ಶಿಕ್ಷೆಗೆ ಗುರಿಯಾದವನು. ಈತನ ವಿರುದ್ಧ 2023ರಲ್ಲಿ ನಾಯಕನಹಟ್ಟಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗಂಗಾಧರಪ್ಪ ಚನ್ನಬಸಪ್ಪ ಹಡಪದ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ, ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ನೊಂದ ಸಂತ್ರಸ್ಥೆಗೆ ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಿದರು. ಸರ್ಕಾರಿ ಅಭಿಯೋಜಕ ಜಗದೀಶ್ ವಾದ ಮಂಡಿಸಿದರು.