ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಹಿರಿಯೂರು ತಾಲೂಕಿನ ರವಿ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಾಲ್ಯವಿವಾಹದ ಪ್ರಕರಣ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪರಿಶೀಲನೆ ನಡೆಸಿದ ಬಳಿಕ, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ರವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.