ಜಿಲ್ಲೆ

ಪೋಸ್ಟರ್ ಬಿಡುಗಡೆಗೊಳಿಸಿ ಬೆಂಬಲ

ಹುಬ್ಬಳ್ಳಿ: ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಕಿಮ್ಸ್​ನಲ್ಲಿ ಶನಿವಾರ ಪೋಸ್ಟರ್ ಬಿಡುಗಡೆ ಮಾಡಿ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು.

ಕೆಲ ರಾಜ್ಯಗಳಲ್ಲಿ ಒಪಿಎಸ್ ಜಾರಿಗೆ ತರಲಾಗಿದೆ. ನಮ್ಮ ರಾಜ್ಯದ ಸರ್ಕಾರಿ ಎನ್​ಪಿಎಸ್ ನೌಕರರಿಗೆ ಜಾರಿಗೊಳಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಡಿ. 19ರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಯಲಿದೆ. ನಾವೆಲ್ಲರೂ ಇದಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದು ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘ, ಕಿಮ್ಸ್​ನ ಎನ್​ಪಿಎಸ್ ನೌಕರರ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದರು.

ರಾಜ್ಯ ಸರ್ಕಾರಿ ಎನ್​ಪಿಎಸ್ ನೌಕರರ ಸಂಘದ ಜಿಲ್ಲಾಧ್ಯಕ್ಷ ಯಲ್ಲಪ್ಪ ಕರೆಣ್ಣವರ, ಫಿರೋಜ ಗುಡೇನಕಟ್ಟಿ, ಕಿಮ್್ಸ ವೈದ್ಯರ ಸಂಘದ ಅಧ್ಯಕ್ಷ ಡಾ. ಸುರೇಶ ಹುಚ್ಚಣ್ಣವರ, ಡಾ. ಮಂಜುನಾಥ ನೇಕಾರ, ಡಾ.ಎಸ್.ಎಸ್. ಶಿರೋಳ, ಡಾ. ಶಕ್ತಿ ಪ್ರಸಾದ ಹಿರೇಮಠ, ಡಾ. ಆನಂದ ವರ್ವ, ಇತರರಿದ್ದರು.