ಬಾಗಲಕೋಟೆ ನಗರದ ಜಿ.ಪಂ ಸಭಾಭವನದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಕೋಟೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾಽಕಾರಿ ಪಿ.ಸುನೀಲಕುಮಾರ ಉಪಸ್ಥಿತರಿದ್ದರು. 
ಜಿಲ್ಲೆ

ಪೌರ ಕಾರ್ಮಿಕ ಹುದ್ದೆ ಖಾಯಂಗೆ ಪ್ರಸ್ತಾವನೆ

ಬಾಗಲಕೋಟೆ: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಹುದ್ದೆ ಖಾಯಂಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಶಿವಣ್ಣ ಕೋಟೆ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ, ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಿಬೇಕಾಗಿದೆ. ಈ ಕುರಿತು ೧೫ ಸದಸ್ಯರನ್ನೊಳಗೊಂಡ ಸಮಿತಿಯಲ್ಲಿ ಸಭೆಯನ್ನು ಮಾಡಲಾಗಿ ಸರ್ಕಾರಕ್ಕೆ ಮೂರು ವರದಿಗಳನ್ನು ಸಲ್ಲಿಸಲಾಗಿದೆ ಎಂದರು.
ಈಗಾಗಲೇ ಮೊದಲನೇ ಹಂತದಲ್ಲಿ ೧೧೧೩೩ ಪೌರ ಕಾರ್ಮಿಕರನ್ನು ಖಾಯಂಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂಳಿದ ೨೬ ಸಾವಿರ ಜನರನ್ನು ಎರಡನೇ ಹಂತದಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ಪೌರ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗೆಳ ಪ್ರತಿಭಾ ಪುರಸ್ಕಾರ ನೀಡುವ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಈಗಾಗಲೇ ೧೬ ಜಿಲ್ಲೆಗಳ ಪ್ರವಾಸ ಕೈಗೊಂಡು ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಗಿದೆ. ಪೌರ ಕಾರ್ಮಿಕ ಕಾರ್ಯ ಅವಶ್ಯವಾಗಿದ್ದು, ಅವರಿಲ್ಲದ ಕ್ಷೇತ್ರಗಳಿಲ್ಲ. ಹಗಲಿರುಳೆನ್ನದೇ ಬಿಸಿಲು, ಮಳೆ, ಗಾಳಿ ಎನ್ನದೇ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಧಾನಮಂತ್ರಿಗಳ ಸ್ವಚ್ಚ ಭಾರತ ಯೋಜನೆಯಲ್ಲಿ ಪೌರ ಕಾರ್ಮಿಕರ ವಿಶೇಷ ಸ್ಥಾನ ಕಲ್ಪಿಸಲಾಗಿದ್ದು, ಅದಕ್ಕಾಗಿ ಪ್ರಶಸ್ತಿಗಳನ್ನು ಸಹ ನೀಡಲಾಗುತ್ತಿದೆ ಎಂದು ಹೇಳಿದರು.

ಅನಿವಾರ್ಯವಾಗಿ ಮ್ಯಾನುವನ್ ಸ್ಟ್ಯಾವೆಂಜರ್ ಮಾಡುವ ಕಾರ್ಯದಲ್ಲಿ ೪೮ ಪರಿಕರಗಳನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಒಂದು ವೇಳೆ ಉಪಯೋಗಿಸದೇ ಇದ್ದಲ್ಲಿ ಅಽಕಾರಿಗಳ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವಾಗ ಸಾರ್ವಜನಿಕರಾಗಲಿ, ಅಽಕಾರಿಗಳಾಗಲಿ ತೊಂದರೆ ಕೊಟ್ಟಲ್ಲಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈ ಕುರಿತು ಈಗಾಗಲೇ ೩೫೦ ಪ್ರಕರಣಗಳು ತನಿಖೆ ಹಂತದಲ್ಲಿವೆ ಎಂದು ಹೇಳಿದರು.

ಓಡಿಸ್ಸಾ ರಾಜ್ಯದಲ್ಲಿ ಈಗಾಗಲೇ ಗರಿಮಾ ಯೋಜನೆಯಡಿ ಪೌರ ಕಾರ್ಮಿಕರ ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ವಿಶ್ರಾಂತಿ ಗೃಹಗಳನ್ನು ನಿರ್ಮಾಣ ಮಾಡಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಽಕಾರಿ ಪಿ.ಸುನೀಲ್‌ಕುಮಾರ ಮಾತನಾಡಿ, ಮಾನವ ರಹಿತ ಸ್ವಚ್ಚತಾ ಕಾರ್ಯಕ್ಕಾಗಿ ಈಗಾಗಲೇ ಕೇರಳ ಹಾಗೂ ಆಂದ್ರ ರಾಜ್ಯಗಳಲ್ಲಿ ರೋಬೋಟ್ ತಂತ್ರಜ್ಞಾನ ಬಳಕೆಯಾಗುತ್ತಿದ್ದು, ಜಿಲ್ಲೆಯ ಬಾಗಲಕೋಟೆ ಮತ್ತು ಜಮಖಂಡಿ ನಗರಸಭೆಗಳಲ್ಲಿ ರೋಬೋಟ್‌ಗಳ ಬೇಡಿಕೆ ಇದ್ದು, ಖರೀದಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಕಾರ್ಯದರ್ಶಿ ಚಂದ್ರಕಲಾ ಉಪಸ್ಥಿತರಿದ್ದರು.