ಬಾಗಲಕೋಟೆ ನಗರಸಭೆ ಎದುರು ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಅವರಿಗೆ ಪೌರ ಕಾರ್ಮಿಕರು ಮನವಿ ಸಲ್ಲಿಸಿದರು. 
ಜಿಲ್ಲೆ

ಪೌರ ಕಾರ್ಮಿಕರ ಸಮಸ್ಯೆ ಪರಿಹರಿಸಲು ಪ್ರಮಾಣಿಕ ಪ್ರಯತ್ನ

ಬಾಗಲಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ನಗರಸಭೆ ಎದುರು ಧರಣಿ ನಡೆಸುತ್ತಿರುವ ಪೌರ ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಶಾಸಕ, ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಬುಧವಾರ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೌರ ಕಾರ್ಮಿಕರ ಸಮಸ್ಯೆ ಗಮನಕ್ಕೆ ಬಂದಿದೆ. ಸಾಧ್ಯವಾದ ಮಟ್ಟಿಗೆ ಸರ್ಕಾರದ ಮಟ್ಟದಲ್ಲಿ ಮಾತನಾಡಿ ಸಮಸ್ಯೆ ಪರಿಹರಿಸಲು ಒತ್ತು ನೀಡುತ್ತೇನೆ. ತಮ್ಮ ಬೇಡಿಕೆಗಳು ನ್ಯಾಯ ಸಮ್ಮತವಾಗಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಪೌರಾಡಳಿತ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಮಳೆಗಾಲವಿರುವುದರಿಂದ ತುರ್ತ ಸಂದರ್ಭ ನಗರದ ನೈರ್ಮಲ್ಯ ಕಾಪಾಡಬೇಕು ಸಾರ್ವಜನಿಕರಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಮುಷ್ಕರ ನಿರತರಲ್ಲಿ ಮನವಿ ಮಾಡಿದರು.

ನಗರಸಭೆಯ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ, ನಾಗರಾಜ ಹದ್ಲಿ, ಬಸವಂತಪ್ಪ ಮೇಟಿ, ನಗರಸಭೆಯ ಸದಸ್ಯರಾದ ಚೆನ್ನವೀರ ಅಂಗಡಿ, ತೌಸಿಪ ಬಾಗಲವಾಡ, ಅಮಿನಸಾಬ ರಕ್ಕಸಗಿ ಇತರರು ಇದ್ದರು.