ಜಿಲ್ಲೆ

ಪೌರ ಕಾರ್ಮಿಕರಿಗೆ ಶೀಘ್ರವೇ ನಿವೇಶನ

Kodagu

ಸೋಮವಾರಪೇಟೆ: ಪಟ್ಟಣ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಬುಧವಾರ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.

ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು. ನಿವೇಶನ ರಹಿತರಿಗೆ ಸದ್ಯದಲ್ಲಿಯೇ ಉಚಿತ ನಿವೇಶನ ನೀಡಲಾಗುವುದು ಎಂದು ಭರವಸೆ ನೀಡಿದರು.

ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮಾತನಾಡಿ, ಸ್ವಚ್ಛತಾ ಕಾಯಕ ಮಾಡುತ್ತಿರುವ ಪೌರ ಕಾರ್ಮಿಕರು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ದುಶ್ಚಟಗಳಿಂದ ದೂರ ಇದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಪಂಚಾಯಿತಿ ಉಪಾಧ್ಯಕ್ಷ ಬಿ. ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಕಚೇರಿಯ ಶಿರಸ್ತೇದಾರ್ ಚಂದ್ರು ಇತರರು ಇದ್ದರು.