ಜಿಲ್ಲೆ

ಪೌರಕಾರ್ಮಿಕರನ್ನು ಖಾಯಂಗೊಳಿಸುವುದಾಗಿ ಸುಳ್ಳು ಭರವಸೆ.

ಹಾಸನ: ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವುದಾಗಿ ಸುಳ್ಳು ಭರವಸೆ ನೀಡಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪೀಕುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಐಪಿಡಿ ಸಾಲಪ್ಪ ಪೌರ ಕಾರ್ಮಿಕರ ನೇರ ಪಾವತಿ ಹಾಗೂ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶಂಕರ್ ರಾಜು ಮಾತನಾಡಿ, ಕಳೆದ 25 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರನ್ನು ಖಾಯಂ ಗೊಳಿಸಬೇಕು ಎಂಬ ಆದೇಶ ಬಂದಿದ್ದು ಅವರನ್ನು ಖಾಯಂ ಮಾಡಿಸುವುದಾಗಿ ಕೆಲ ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಪೌರ ಕಾರ್ಮಿಕರಿಂದ ಹಣವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.


ಕೂಡಲೇ ಈ ಬೆಗ್ಗೆ ಗಮನ ಹರಿಸಿ ಖಾಯಂ ಗೊಳಿಸುವ ಸಲುವಾಗಿ ಪೌರ ಕಾರ್ಮಿಕರಿಂದ ಹಣ ಪಡೆಯುತ್ತಿರುವ ವರ ವಿರುದ್ದ ತನಿಖೆ ಹಣ ಪೀಕುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


ಈ ಸಂಧರ್ಭದಲ್ಲಿ ಜೈ ಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಪಳನಿ, ಜಗದೀಶ್ ಇತರರು ಇದ್ದರು.