ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಪೌರ ಕಾರ್ಮಿಕರಿಗೆ ಡೆಂೆ ನಿಯಂತ್ರಣ ಕುರಿತ ಕರಪತ್ರ ವಿತರಿಸುವ ಮೂಲಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್‌ಕುಮಾರ್, ಪ್ರಭಾಕರ್, ಸುಶೀಲಾಬಾಯಿ ಇತರರಿದ್ದರು.  
ಜಿಲ್ಲೆ

ಪೌರಕಾರ್ಮಿಕರು ಸ್ವಚ್ಛತೆಗೆ ಗಮನಹರಿಸಲಿ

ಭದ್ರಾವತಿ: ತಾಲೂಕು ಆಸ್ಪತ್ರೆಯಿಂದ ರಾಷ್ಟ್ರೀಯ ಡೆಂೆ ದಿನಾಚರಣೆ ಪ್ರಯುಕ್ತ ಮಂಗಳವಾರ ನಗರಸಭೆ ಆವರಣದಲ್ಲಿ ಪೌರ ಕಾರ್ಮಿಕರಿಗೆ ಡೆಂೆ ಕುರಿತು ಪುನರ್ಮನನ ತರಬೇತಿ ಕಾರ್ಯಕ್ರಮ ನಡೆಸಲಾಯಿತು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್ ಡೆಂೆ ನಿಯಂತ್ರಣ ಕುರಿತ ಕರಪತ್ರ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಸ್ವಚ್ಛತೆಯಲ್ಲಿ ತೊಡಗುವ ಪೌರಕಾರ್ಮಿಕರು ವೈಯಕ್ತಿಕ ಸ್ವಚ್ಛತೆ ಕಡೆಗೂ ಗಮನಹರಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡುವಾಗ ಎಚ್ಚರಿಕೆ ವಹಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ವೈದ್ಯಾಧಿಕಾರಿ ಡಾ. ಪ್ರಭುದೇವ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆನಂದಮೂರ್ತಿ, ನಗರಸಭೆ ಆರೋಗ್ಯಾಧಿಕಾರಿ ಪ್ರಭಾಕರ್, ರಮೇಶ್, ಆಶಾಲತಾ, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಇದ್ದರು.