ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಜಿ.ಪಂ ಸಿಇಒ ಟಿ.ಭೂಬಾಲನ್ ಅಧ್ಯಕ್ಷತೆಯಲ್ಲಿ ನವೆಂಬರ ಮಾಹೆಯ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲಕುಮಾರ ಬಾವಿದಡ್ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಅಭಿಯಂತರ ಹಿರೇಮಠ ಇತರರು ಉಪಸ್ಥಿತರಿದ್ದರು.  
ಜಿಲ್ಲೆ

ಪ್ರಗತಿ ಸಾಧಿಸದ ಅಧಿಕಾರಿಗಳಿಗೆ ನೋಟಿಸ್ ಜಾರಿ

ಬಾಗಲಕೋಟೆ: ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡುವ ಮೂಲಕ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಭಿನಂದನೆಗಳು. ಪ್ರಗತಿ ಸಾಧಿಸದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಜಿ.ಪಂ ಸಿಇಒ ಟಿ.ಭೂಬಾಲನ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನವೆಂಬರ ಮಾಹೆಯ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ನವೆಂಬರ ಅಂತ್ಯಕ್ಕೆ ಸಹಕಾರ, ಕೈಮಗ್ಗ ಮತ್ತು ಜವಳಿ, ಕಾರ್ಮಿಕ, ಆಹಾರ, ಕೈಗಾರಿಕೆ, ಉಪ ಅರಣ್ಯ ಸಂರಕ್ಷಣಾ ಇಲಾಖೆಗಳು ನೂರಕ್ಕೆ ನೂರರಷ್ಟು ಪ್ರಗತಿ ಸಾಽಸಿದ್ದು ಸಂತೋಷ ತಂದಿದೆ ಎಂದರು.
ಅಲ್ಲದೆ ಕಡಿಮೆ ಪ್ರಗತಿ ಸಾಧಿಸಿದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಇಲ್ಲಿಯವರೆಗೆ ಬಿಡುಗಡೆಯಾದ ಅನುದಾನ ಡಿಸೆಂಬರ ಅಂತ್ಯಕ್ಕೆ ಸಂಪೂರ್ಣ ಖರ್ಚು ಭರಿಸಬೇಕು. ಸಿವಿಲ್ ಕಾಮಗಾರಿ ಕೈಗೊಂಡವರು ಜನವರಿ ಅಂತ್ಯಕ್ಕೆ ಅನುದಾನ ಸಂಪೂರ್ಣ ಖರ್ಚು ಭರಿಸುವ ತಿಳಿಸಿದರು.
ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲಿಸಿದಾಗ ರಾಜ್ಯ ವಲಯದಿಂದ ಬಿಡುಗಡೆಯಾದ ಅನುದಾನದಲ್ಲಿ ಕೆಲವಷ್ಟು ಪ್ರಗತಿ ಸಾಸಿದರೆ, ಜಿಲ್ಲಾ ವಲಯದಲ್ಲಿ ಶೂನ್ಯ ಪ್ರಗತಿ ಸಾಽಸಿದ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಫಲಾನುಭವಿಗಳಿಗೆ ಸಂಬಂಧಿಸಿದ ಕೆಲಸಗಳನ್ನು ಪೂರ್ಣಗೊಳಿಸಬೇಕು. ಇತರೆ ಸಿವಿಲ್ ಕಾರ್ಯಗಳನ್ನು ಜನವರಿ ಮಾಹೆಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೇ ಸಭೆಗೆ ಅನಽಕೃತವಾಗಿ ಗೈರು ಹಾಜರಾದವರಿಗೆ ನೋಟಿಸ್ ನೀಡಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಉಪನಿರ್ದೇಶಕ ರಾಹುಲಕುಮಾರ ಬಾವಿದಡ್ಡಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನಬಸಪ್ಪ ಕೊಡ್ಲಿ, ಬಾಗಲಕೋಟೆ ಹೆಸ್ಕಾಂ ಅಧೀಕ್ಷಕ ಅಭಿಯಂತರ ಹಿರೇಮಠ, ಪಂಚಾಯಿತಿ ರಾಜ್ ಇಲಾಖೆಯ ಮುಖ್ಯ ಅಭಿಯಂತರ ಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.