ಚಿತ್ರದುರ್ಗ: ರಾಜ್ಯದ ಅಸ್ಮಿತೆಯ ರಕ್ಷಣೆಗಾಗಿ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ತಾವು ಕಣಕ್ಕೆ ಇಳಿದಿರುವುದಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಎಂ.ಜಿ.ಕಿಶನ್ ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳು ಪ್ರಾಬಲ್ಯ ಸಾಧಿಸುತ್ತಿದ್ದು, ಪ್ರಾದೇಶಿಕ ಪಕ್ಷವೊಂದು ಅಸ್ತಿತ್ವ ಕಳೆದುಕೊಂಡಿದೆ. ಪ್ರಜ್ಞಾವಂತ ಮತದಾರರು ತಮ್ಮನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಮುಖಂಡರಾದ ವಿನಯ್, ಮಹೇಶ್, ಬಾಲರಾಜ್ ಇದ್ದರು.