ಜಿಲ್ಲೆ

ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನ ದೂರಿನ ಸಮಗ್ರ ತನಿಖೆಗೆ ಒತ್ತಾಯ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮಾಡಿರುವ ಆರೋಪದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದ್ದು, ಅವರು ಮಾಡಿರುವ ಕೃತ್ಯವನ್ನು ಮರೆಮಾಚಲು ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಕಾಂಗ್ರೆಸ್‌ರ ಕುಮ್ಮಕ್ಕಿನಿಂದ ಎಂಬ ಹೇಳಿಕೆ ಖಂಡನೀಯ,
ಕುಟುಂಬದವರು ಮಾಡಿರುವ ಕೃತ್ಯದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ ಮಾಡಿದ್ದಾರೆ ಆದರೆ ಇದಕ್ಕೆ ಕಾಂಗ್ರೆಸ್ ಯಾವುದೇ ರೀತಿ ಕುಮ್ಮಕ್ಕು ನೀಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಈಗಾಗಲೇ ಗೃಹ ಸಚಿವರಿಗೆ ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಸತ್ಯತೆಯನ್ನು ಬಯಲಿಗೆ ಎಳೆಯರಬೇಕು ಮತ್ತು ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲಾಗಿದೆ. ಅಲ್ಲದೆ ಐಜಿ ಮತ್ತು ಎಸ್‌ಪಿ ಅವರಿಗೂ ಕೂಡ ಇದರ ಬಗ್ಗೆ ಸಮಗ್ರವಾಗಿ ತನಿಖೆ ಮಾಡುವಂತೆ ತಿಳಿಸಲಾಗಿದೆ ಎಂದರು
ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಮತ್ತು ಸರ್ಕಾರದ ಸಚಿವರು ಕೇಂದ್ರಕ್ಕೆ ಭೇಟಿ ನೀಡಿ ಕೊಬ್ಬರಿ ಬೆಲೆಗೆ ಬೆಂಬಲ ಬೆಲೆ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದರು ಅದೇ ರೀತಿ ಜೆಡಿಎಸ್‌ನವರು ಕೂಡ ಕೇಂದ್ರದ ಮೇಲೆ ಮನವಿ ಮಾಡಿದ್ದರು ಅದರ ಪರಿಣಾಮ ಬೆಲೆ ಹೆಚ್ಚಳ ಮಾಡಲಾಗಿದೆ.ಕೇಂದ್ರದಿಂದ ರೈತರಿಗೆ ಅನುಕೂಲವಾಗಿದೆ ಅದನ್ನ ಬಿಟ್ಟು ಇವರು ಅದರ ಲಾಭ ಪಯಡೆಯಲು ಯತ್ನಿಸುತ್ತಿರುವುದು ದುರದೃಷ್ಟಕರ ಎಂದು ಲೇವಡಿ ಮಾಡಿದರು.

ಎಂಪಿ ಚುನಾವಣೆ ಕಾಂಗ್ರೆಸ್ ಗೆಲುವು:
ಮುಂಬರುವ ಲೋಕಸಭೆಯ ಚುನಾವಣೆಗೆ ಸೂಕ್ತ ಅಭ್ಯರ್ಥಿಯನ್ನು ಶೀಘ್ರದಲ್ಲಿ ಪಕ್ಷ ಘೋಷಣೆ ಮಾಡಲಿದೆ. ಈಗಾಗಲೇ ಹಲವರು ಆಕಾಂಕ್ಷೆಗಳಿದ್ದು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಜವಾಬ್ದಾರಿ ನೀಡಿಲಾಗಿದೆ. ಅವರು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಚುನಾವಣೆಯ ಸಿದ್ಧತೆ ನಡೆಸಲಿದ್ದಾರೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯ ಆಕಾಂಕ್ಷಿಗಳ ಪಟ್ಟಿ ದೆಹಲಿಗೆ ಹೋಗಿದ್ದು ಅದರಲ್ಲಿ ಜಿಲ್ಲೆಯಿಂದ ಐದು ಜನರು ಹೆಸರಿರುವುದಾಗಿ ತಿಳಿದು ಬಂದಿದೆ. ಅದರಲ್ಲಿ ನನ್ನ ಹೆಸರು ಕೂಡ ಇದೆ. ಯಾರಿಗೆ ಪಕ್ಷ ಟಿಕೆಟ್ ನೀಡಿದರೂ ಕೂಡ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರವನ್ನ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಇದಕ್ಕಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಅಭ್ಯರ್ಥಿಗಳನ್ನ ಘೋಷಣೆ ಮಾಡುವಂತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಹೊಳೆನರಸೀಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಹಾಜರಿದ್ದರು