ಜಿಲ್ಲೆ

ಪ್ರತಾಪ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ಹೆಡ್‌ಕಾನ್‌ಸ್ಟೇಬಲ್ ಅಮಾನತು

ಮೈಸೂರು: ಸಾಮಾಜಿಕ ಜಾಲತಾಣದ ಮೂಲಕ ಸಂಸದ ಪ್ರತಾಪ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ನಗರದ ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಿ.ಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ.

ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವೆ ಮಾಧ್ಯಮಗಳಲ್ಲಿ ವಾದ-ವಿವಾದ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಪ್ರಕಾಶ್ ಅವರು, ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ.

ಇದನ್ನು ಗಮನಿಸಿದ ಸಂಸದರು ಜೂ.30ರಂದು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ ಆಯುಕ್ತ ಬಿ.ರಮೇಶ್ ಅವರು ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.