ಮೈಸೂರು: ವಿಶ್ವ ವಿದ್ಯಾಲಯಗಳಲ್ಲಿ ಕುಲಪತಿಯಾಗಲು 5 ರಿಂದ 6 ಕೋಟಿ ರೂ. ನೀಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದು, ಈ ಕುರಿತು ಲೋಕಾಯುಕ್ತಗೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.
ಒಂದು ವಾಕ್ಯವನ್ನು ಇಂಗ್ಲಿಷ್‌ನಲ್ಲಿ ಬರೆಯಲು ಬಾರದವರು ಸಹ ಕೆ-ಸೆಟ್ ಬರೆದು ಸಹಾಯಕ ಪ್ರಾಧ್ಯಾಪಕರಾಗುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಬೇಕು. ಪ್ರತಾಪ್ ಸಿಂಹ ಆಡಿರುವ ಮಾತಿನ ಆಡಿಯೋ ನನ್ನ ಬಳಿ ಇದೆ ಎಂದರು.