ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಹಿನ್ನಡೆಗೆ ಸಾಮಾಜಿಕ-ಆರ್ಥಿಕ, ರಾಜಕೀಯ ಮತ್ತು ಐತಿಹಾಸಿಕ ಅಂಶ ಕಾರಣ ಎಂದು ಸಿಯುಕೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಿಜಾಮರ ಪ್ರತಿಗಾಮಿ ನೀತಿ, ಆಡಳಿತ ಸೇರಿ ಎಲ್ಲ ರೀತಿಯಿಂದಲೂ ಈ ಭಾಗ ಹಿಂದುಳಿದಿದೆ. ನಿಜಾಮರ ಹಿಡಿತದಿಂದ ಹೊರ ಬರಲು ಹಲವು ಹೋರಾಟಗಾರರ ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸಬೇಕು ಎಂದರು.
ವಿಶ್ವವಿದ್ಯಾಲಯಗಳು ಪ್ರದೇಶದ ಅಭಿವೃದ್ಧಿಗೆ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ. ಆದರೆ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಮೂಲಕ ಕೊಡುಗೆ ನೀಡಬಹುದು. ನಮ್ಮ ಶಿಕ್ಷಕರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂಬAಧಿಸಿದ ಸಮಸ್ಯೆಗಳು ಮತ್ತು ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಮತ್ತು ಸೂಕ್ತ ಪರಿಹಾರಗಳನ್ನು ಒದಗಿಸಬೇಕು ಎಂದು ಹೇಳಿದರು.
ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ, ಹಣಕಾಸು ಅಧಿಕಾರಿ ಬಿ.ರಾಮದೊರೈ, ಪ್ರೊ.ಚನ್ನವೀರ ಆರ್.ಎಂ., ಪ್ರೊ.ಎಂ.ಎಸ್.ಪಾಸೋಡಿ, ಸಹಾಯಕ ಕುಲಸಚಿವ ಸುನೀಲ್ ಜಿ. ಇತರರಿದ್ದರು. ಡಾ.ಜಯದೇವಿ ಜಂಗಮಶೆಟ್ಟಿ ಮತ್ತು ಡಾ.ಸ್ವಪ್ನಿಲ್ ಚಾಪೇಕರ್ ರಾಷ್ಟç ಗೀತೆ ಹಾಡಿದರು. ಡಾ.ಗಣಪತಿ ಸಿನ್ನೂರ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.