ಚಿತ್ರದುರ್ಗ: ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಜು. 20ರಂದು ಸಂಜೆ 4ಕ್ಕೆ ಎಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್‌ನಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ರಸ್ಟ್ ಉದ್ಘಾಟಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಎಂಎಲ್ಸಿ ಡಿ.ಟಿ.ಶ್ರೀನಿವಾಸ್, ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ್ ಅತಿಥಿಗಳಾಗಿ ಭಾಗವಹಿಸುವರು.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಂದು ಮಧ್ಯಾಹ್ನ 1.30ರಿಂದ 2.30ರ ವರೆಗೆ ಭೋಜನ, ಭೂಮಿ ತಾಯಿ ಬಳಗದಿಂದ ವಾದ್ಯಗೋಷ್ಠಿ, ಮೈಸೂರು ನಗಾರಿ ಮಂಜು ತಂಡದಿಂದ ನಗಾರಿ ಕುಣಿತ ಹಮ್ಮಿಕೊಳ್ಳಲಾಗಿದೆ. ನಂತರ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಟ್ರಸ್ಟ್ ತಿಳಿಸಿದೆ.