ಜಿಲ್ಲೆ

ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನ

ರಾಜಣ್ಣ

ಕುಶಾಲನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಕ್ರೀಡಾಕೂಟವನ್ನು ಡಿಸೆಂಬರ್ ತಿಂಗಳಲ್ಲಿ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ. ಶಿವಪ್ಪ ತಿಳಿಸಿದ್ದಾರೆ.

2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಆಧಾರ್ ಜೆರಾಕ್ಸ್, 2 ಪಾಸ್‌ಪೋರ್ಟ್ ಸೈಜ್ ಫೋಟೊ ಜತೆಗೆ ಕೈಬರಹದ ಅರ್ಜಿಯೊಂದಿಗೆ, ಅಂಕಪಟ್ಟಿಯನ್ನು ಲಗತ್ತಿಸಿ ನ.30 ರ ಒಳಗಾಗಿ ಕಳುಹಿಸಿಕೊಡಬೇಕಿದೆ. ಡಿ.25 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂತೆಯೆ ಸಮುದಾಯದವರಿಗೆ ಡಿ.22 ರಂದು ಕುಶಾಲನಗರದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ 541, 4ನೇ ಬ್ಲಾಕ್, ಶಿವರಾಮ ಕಾರಂತ ಬಡಾವಣೆ, ಕುಶಾಲನಗರ ಇಲ್ಲಿಗೆ ಅಂಚೆ ಮೂಲಕ ಅಥವಾ ಸೋಮವಾರಪೇಟೆಯಲ್ಲಿ ಯುವರಾಜ-9449128234, ನಾಗೇಶ್-9448346193, ಕೊಡ್ಲಿಪೇಟೆಯಲ್ಲಿ ಪ್ರವೀಣ್-9448167231, ಮಮತಾ-9448537688, ಶನಿವಾರಸಂತೆಯಲ್ಲಿ ಉದಯಕುಮಾರ್-6363058245, ತೊರೆನೂರು ಚಂದ್ರಪ್ಪ ಎಚ್.ಬಿ-9449514897, ವಿರಾಜಪೇಟೆಯಲ್ಲಿ ರಾಜೇಶ್-9483110979, ಅನುರಾಧಾ-948025194 ಅವರನ್ನು ಸಂಪರ್ಕಿಸಬಹುದು.

ಘಟಕದ ಗೌರವಾಧ್ಯಕ್ಷ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ ಏರ್ಪಡಿಸಲಾಗಿದೆ. ಸಂಘಟನೆ ನಿಟ್ಟಿನಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿ ವರ್ಷ ಇದೊಂದು ಮಾದರಿ ಕಾರ್ಯಕ್ರಮವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸಭೆಯ ತೀರ್ಮಾನದಂತೆ ಡಿಸೆಂಬರ್ ತಿಂಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ತಮಗೆ ದೊರೆತ ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಎಸ್.ಎಸ್.ಸುರೇಶ್ ಮಾಯಮುಡಿ, ಪ್ರವೀಣ್ ಎಚ್.ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂಭಶಿವಮೂರ್ತಿ, ಖಜಾಂಚಿ ಎಚ್.ಪಿ.ಉದಯಕುಮಾರ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಆದರ್ಶ್ ಕೆ.ಪಿ., ಕುಶಾಲನಗರ ತಾಲೂಕು ಅಧ್ಯಕ್ಷ ಎಚ್.ಎಂ.ಮಧುಸೂದನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ರಾಜೇಶ್, ನಿರ್ದೇಶಕರು ಇದ್ದರು.