ಜಿಲ್ಲೆ

ಪ್ರತಿಭಾ ಪುರಸ್ಕಾರ ಸಮಾರಂಭ 28ರಂದು

ಚಿತ್ರದುರ್ಗ: ಜಿಲ್ಲಾ ಬೇಡಜಂಗವ ಸಮಾಜ ಸಂಸ್ಥೆ ಮತ್ತು ತಾಲೂಕು ಬೇಡ ಜಂಗಮ ಸಮಾಜ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪ್ರತಿಭಾ ಪುರಸ್ಕಾರ ಮತ್ತು ಶಿಷ್ಯ ವೇತನ ವಿತರಣಾ ಸಮಾರಂಭವನ್ನು ಜು.28ರ ಬೆಳಗ್ಗೆ 10.30ಕ್ಕೆ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ. ಹೆಬ್ಬಾಳು ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬೇಡಜಂಗಮ ಸಮಾಜದ ಜಿಲ್ಲಾದ್ಯಕ್ಷ ಸೋಮಶೇಖರ ಮಂಡಿಮಠ ಅಧ್ಯಕ್ಷತೆ ವಹಿಸುವರು. ಎಂಎಲ್‌ಸಿ ಕೆ.ಎಸ್.ನವೀನ್ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್, ಜಿ.ಎಚ್.ತಿಪ್ಪಾರೆಡ್ಡಿ, ಎಂ.ಬಿ.ತಿಪ್ಪೇರುದ್ರಪ್ಪ, ಜಿಲ್ಲಾ ಬೇಡಜಂಗಮ ಸಮಾಜದ ಕಾರ್ಯಾಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನಸ್ವಾಮಿ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು.