ಜಿಲ್ಲೆ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಮೈಸೂರು ಜಿಲ್ಲಾ ಉಪ್ಪಾರ ನೌಕರರು ಹಾಗೂ ವೃತ್ತಿಪರ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.85 ರಷ್ಟು ಅಂಕ ಪಡೆದ ಮೈಸೂರು, ಚಾಮರಾಜನಗರ, ಮಂಡ್ಯ, ಹಾಗೂ ಕೊಡಗು, ಜಿಲ್ಲೆಯ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸಾಧಕರು, ಬಡ್ತಿಹೊಂದಿದ ಹಾಗೂ ನಿವೃತ್ತಿ ಹೊಂದಿದ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಮಾ.9 ರಂದು ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ೆ.8 ರ ವರೆಗೆ ಎಂ.ಜಯಕುಮಾರ್, ಲೇಟ್ ಮಹದೇವಶೆಟ್ಟಿ, ಚೆನ್ನಿಪುರದಮೋಳೆ, 24 ನೇ ವಾರ್ಡ್, ಚಾಮರಾಜನಗರ ಜಿಲ್ಲಾ ಉಪ್ಪಾರ ಯುವಕರ ಸಂಘದ ಕಚೇರಿಯ ವಿಳಾಸಕ್ಕೆ ನೀಡಲು ಕೋರಲಾಗಿದೆ. ವಿದ್ಯಾರ್ಥಿಗಳು ಮೂಲ ಅಂಕಪಟ್ಟಿ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಜೆರಾಕ್ಸ್, ಪೋಟೋ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಮೊ.9886371687 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.