ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘವು ರಾಜ್ಯ ಸರ್ಕಾರಿ ಅಧಿಕಾರಿಗಳು ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಅಧಿಕ ಅಂಕ ಗಳಿಸಿದ ಅಧಿಕಾರಿಗಳು ಮತ್ತು ನೌಕರರ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ.
ಸಾಧಕ ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಘದ ಜಿಲ್ಲಾ ಅಥವಾ ತಾಲೂಕು ಘಟಕಗಳ ಅಧ್ಯಕ್ಷರ ದೃಢೀಕರಣದೊಂದಿಗೆ https://ksgeanews.Blogspot.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಡಾ.ಸಿ.ಎನ್.ರೇಣುಕಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.